ದಾವಣಗೆರೆ ಮಹಾನಗರ ಪಾಲಿಕೆ ಬಜೆಟ್ ಮಂಡನೆ: ಬಜೆಟ್‌ನ ಗಾತ್ರ ಎಷ್ಟು?, ಇಲ್ಲಿದೆ ವಿವರ
ದಾವಣಗೆರೆ ಮಹಾನಗರ ಪಾಲಿಕೆಯ 2023-24ನೇ ಸಾಲಿನ 17 ಕೋಟಿ 81 ಲಕ್ಷ ರೂಪಾಯಿ ಉಳಿತಾಯ ಬಜೆಟ್ ಮಂಡನೆ ಮಾಡಲಾಗಿದೆ.
ದಾವಣಗೆರೆ, ಫೆಬ್ರವರಿ, 21: ದಾವಣಗೆರೆ ಮಹಾನಗರ ಪಾಲಿಕೆಯ 2023-24ನೇ ಸಾಲಿನ 17 ಕೋಟಿ 81 ಲಕ್ಷ ರೂಪಾಯಿ ಉಳಿತಾಯ ಬಜೆಟ್ ಮಂಡನೆ ಮಾಡಲಾಗಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮೇಯರ್ ಜಯಮ್ಮ ಗೋಪಿನಾಯ್ಕ್ ಅಧ್ಯಕ್ಷತೆಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಸೋಗಿ ಶಾಂತಕುಮಾರ್ ಅವರು ಬಜೆಟ್ ಮಂಡಿಸಿದರು.
ಆರಂಭಿಕವಾಗಿ 6,725.65 ರೂಪಾಯಿ ಇದ್ದು, ಒಟ್ಟು ಸ್ವೀಕೃತಿ 49,063.60 ಲಕ್ಷ ರೂಪಾಯಿ ಆಗಿದೆ. ಒಟ್ಟು ಪಾವತಿ 53,99,8.17 ಲಕ್ಷ ರೂಪಾಯಿ ಆಗಿದೆ. ನಗರ ವ್ಯಾಪ್ತಿಯಲ್ಲಿನ ಕಟ್ಟಡಗಳು ಮತ್ತು ಖಾಲಿ ನಿವೇಶನಗಳ ಮೇಲೆ ವಿಧಿಸಲಾಗುವ ಆಸ್ತಿ ತೆರಿಗೆಯು ಪಾಲಿಕೆಯ ಅತ್ಯಂತ ಪ್ರಮುಖ ಸ್ವಂತ ಆದಾಯದ ಮೂಲವಾಗಿದೆ. ಪ್ರಸ್ತುತ ಇ- ಆಸ್ತಿ ತಂತ್ರಾಂಶದಲ್ಲಿ ನಗರದ ಎಲ್ಲಾ ಆಸ್ತಿ ವಿವರಗಳನ್ನು ನಮೂದಿಸುವ ಕಾರ್ಯ ಜಾರಿಯಲ್ಲಿದೆ. ಈ ಕಾರ್ಯ ಪೂರ್ಣಗೊಂಡ ಬಳಿಕ ಶೇಕಡಾ 100 ರಷ್ಟು ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗುವುದು. ಈ ಮೂಲಕ ಪ್ರಸಕ್ತ ಸಾಲಿನಲ್ಲಿ ಒಟ್ಟು 30 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಣೆಯ ಗುರಿ ಹೊಂದಲಾಗಿದೆ.
ವಾಣಿಜ್ಯ ಮಳಿಗೆಗಳ ಬಾಡಿಗೆ, ನೀರು ಸರಬರಾಜು ಬಳಕೆದಾರರ ಶುಲ್ಕ, ನೀರು ಸರಬರಾಜು ಸಂಪರ್ಕ ಶುಲ್ಕ, ಒಳಚರಂಡಿ ಸಂಪರ್ಕ ಬಳಕೆದಾರರ ಶುಲ್ಕ, ಘನತ್ಯಾಜ್ಯ ನಿರ್ವಹಣೆ ಬಳಕೆದಾರರ ಶುಲ್ಕ, ಉದ್ದಿಮೆ ಪರವಾನಗಿ ಶುಲ್ಕ, ರಸ್ತೆ ಕಡಿತ ಶುಲ್ಕ, ಆಸ್ತಿಗಳ ವರ್ಗಾವಣೆ ಮೇಲಿನ ಹೆಚ್ಚುವರಿ ಶುಲ್ಕ, ಅಭಿವೃದ್ಧಿ ಶುಲ್ಕದ ಮೂಲಕ ಆದಾಯವನ್ನು ನಿರೀಕ್ಷಿಸಲಾಗಿದೆ.

ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು
ಸಭೆಯಲ್ಲಿ ಮಾತನಾಡಿದ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್ ಹಾಗೂ ಸದಸ್ಯ ಎ. ನಾಗರಾಜ್, ತೆರಿಗೆ ಕಟ್ಟದವರಿಂದ ವಸೂಲಿ ಮಾಡಿ. ಅದನ್ನು ಬಿಟ್ಟು ಸರಿಯಾಗಿ ತೆರಿಗೆ ಪಾವತಿಸುವವರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು. ಜನತೆ ಮೇಲೆ ಹೊರೆ ಹೇರುವುದು ಬೇಡ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆಯ ಆಯುಕ್ತೆ ರೇಣುಕಾ ಅವರು, ಈಗಾಗಲೇ ತೆರಿಗೆ ಆಂದೋಲನವನ್ನು ಪ್ರಾರಂಭಿಸಲಾಗಿದೆ. ವಾರ್ಡ್‌ಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ತೆರಿಗೆ ಪಾವತಿಸದವರಿಂದ ವಸೂಲಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ತೆರಿಗೆ ಪಾವತಿಸುವವರಿಗೆ ಹೊರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹೊರಗುತ್ತಿಗೆಗೆ ತಗಲುವ ವೆಚ್ಚದ ವಿವರ
80 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂಬ ಮಾಹಿತಿ ಇದೆ. ಕೇವಲ 30 ಕೋಟಿ ರೂಪಾಯಿ ಆದಾಯ ನಿರೀಕ್ಷೆ ಹೊಂದಲಾಗಿದೆ. ಹೊರಗುತ್ತಿಗೆಗೆ 15 ಕೋಟಿ ರೂಪಾಯಿ ಆಗಲಿದೆ. ನಿರ್ವಹಣೆಗೆ 7 ಕೋಟಿ ರೂಪಾಯಿ ಬೇಕಾಗುತ್ತದೆ. ಪಾಲಿಕೆಯ ದೈನಂದಿನ ಆಡಳಿತ ನಿರ್ವಹಣೆಗೆ ಅವಶ್ಯಕವಿರುವ ವಿವಿಧ ಸೇವೆಗಳಾದ ಬೀದಿ ದೀಪಗಳ ನಿರ್ವಹಣೆ, ಘನತಾಜ್ಯ ನಿರ್ವಹಣೆ ವಾಹನಗಳು, ಯಂತ್ರೋಪಕರಣಗಳ ವಾಹನ ಚಾಲಕರು, ಗಣಕಯಂತ್ರ ನಿರ್ವಾಹಕರು, ಯುಜಿಡಿ ಸಹಾಯಕರು, ರಾತ್ರಿ ಕಾವಲುಗಾರರು, ಇತರೆ ಸಿಬ್ಬಂದಿ ಸೇವೆಯನ್ನು ಹೊರಗುತ್ತಿಗೆ ಮೂಲಕ ಪಡೆಯಲಾಗುತ್ತಿದೆ.
ಈ ಆರ್ಥಿಕ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚವಾಗುವ ಅಂದಾಜು ಮಾಡಲಾಗಿದೆ. ಹೇಗೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಗುತ್ತಿಗೆದಾರರಿಗೆ ಹಣ ಪಾವತಿಸುವುದು ಯಾವ ಮೂಲಗಳಿಂದ. ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಂತಹ ಪರಿಸ್ಥಿತಿಯಲ್ಲಿಯೂ ತಲೆದೋರಲಿದೆ ಎಂದು ಸಭೆಯ ಗಮನಕ್ಕೆ ತಂದರು.

ತೊಂದರೆಯಾಗದಂತೆ ಸೂಕ್ತ ಕ್ರಮ
ನಂತರ ಪ್ರತಿಕ್ರಿಯಿಸಿದ ಆಯುಕ್ತರು, ಯುಜಿಡಿ, ನೀರು ಅಗತ್ಯವಾಗಿ ಆಗಬೇಕಿರುವ ಕೆಲಸವಾಗಿದೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬಡ್ಡಿಯೇ ಮೂರು ಕೋಟಿ ರೂಪಾಯಿ ಸಿಗುತ್ತದೆ. ಯಾವುದೇ ತೊಂದರೆಯಾಗದೇ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

60 ಲಕ್ಷ ರೂ. ಆದಾಯದ ನಿರೀಕ್ಷಣೆ
ಇನ್ನು ಸಂತೆಗಳು ಹಾಗೂ ಮಾರುಕಟ್ಟೆಗಳಲ್ಲಿ ದೈನಂದಿನ ವ್ಯಾಪಾರ ಮಾಡುವ ರಸ್ತೆ ಬದಿ ವ್ಯಾಪಾರಿಗಳಿಂದ ಕನಿಷ್ಠ ದರದಲ್ಲಿ ಸಂತೆ ಸುಂಕ ಸಂಗ್ರಹಣೆ ಮಾಡಲಾಗುತ್ತಿದೆ. ವಾರ್ಷಿಕ ಹರಾಜಿನ ಮೂಲಕ ಸಂತೆ ಸುಂಕ ಸಂಗ್ರಹಣೆ ಖಾಸಗಿಯವರಿಗೆ ವಹಿಸಲಾಗಿದೆ. ಈ ಮೂಲದಿಂದ 60 ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಪಕ್ಷ ಸದಸ್ಯರು, ಬಡವರ ಹೊಟ್ಟೆ ಮೇಲೆ ಹೊಡೆಯುವುದು ಬೇಡ.

ಸಣ್ಣ ವ್ಯಾಪಾರಿಗಳಿಗೆ ರಿಯಾಯಿತಿ ನೀಡಿ
ರೌಡಿಗಳಿಗೆ ಟೆಂಡರ್ ನೀಡಿದರೆ ರೈತರ, ಬಡವರ ತರಕಾರಿ ಸೇರಿದಂತೆ ಇತರೆ ವಸ್ತುಗಳನ್ನು ಹಣ ಕೊಡದಿದ್ದರೆ ಎತ್ತಿ ಬಿಸಾಕುತ್ತಾರೆ. ಬಾಕಿ ಬರಬೇಕಿರುವ 40 ಲಕ್ಷ ರೂಪಾಯಿ ಮೊದಲು ವಸೂಲಿ ಮಾಡಿ. ಕೊರೊನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಸಣ್ಣ ವ್ಯಾಪಾರಿಗಳು ತೊಂದರೆಗೆ ಸಿಲುಕಿದ್ದು, ಅವರಿಗೆ ರಿಯಾಯಿತಿ ನೀಡಿ. ಈ ಟೆಂಡರ್ ಕರೆಯುವುದನ್ನು ರದ್ದು ಮಾಡಿ ಎಂದು ಆಗ್ರಹಿಸಿದರು.

ಯೋಜನೆಗಳ ವಿವರ ಇಲ್ಲಿದೆ
ಶಿಥಿಲಾವಸ್ಥೆಯಲ್ಲಿರುವ ಹಾಗೂ ಹಳೆಯ ಗರಡಿ ಮನೆಗಳ ನವೀಕರಣಕ್ಕೆ 50 ಲಕ್ಷ ರೂಪಾಯಿ ಕಾಯ್ದಿರಿಸಲು ಉದ್ದೇಶಿಸಲಾಗಿದೆ. ನಗರದ ಹೃದಯ ಭಾಗವಾದ ರೈಲ್ವೆ ನಿಲ್ದಾಣ ಹಾಗೂ ಮಹಾನಗರ ಪಾಲಿಕೆಯ ಮುಂಭಾಗ ಸ್ಕೈವಾಕ್ ನಿರ್ಮಾಣ, ಉದ್ಯಾನವನಗಳಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಪುತ್ಥಳಿಗಳ ಸ್ವಚ್ಛತೆ ಹಾಗೂ ಸುಣ್ಣಬಣ್ಣ ಬಳಿಯುವುದು, ಪಾಲಿಕೆಯ ಕಾರ್ಮಿಕರಿಗೆ ಸ್ವಚ್ಛತಾ ಕಾರ್ಯಗಳಿಗೆ ಪರಿಕರ, ವಿಶ್ರಾಂತಿ ಗೃಹ ನಿರ್ಮಾಣ, ಘನತ್ಯಾಜ್ಯ ನಿರ್ವಹಣೆಗೆ ಜೆಟ್ಟಿಂಗ್, ಸಕ್ಕಿಂಗ್ ಯಂತ್ರಗಳ ಖರೀದಿ, ಪಿಪಿಪಿ ಮಾದರಿಯಲ್ಲಿ ಮಾಲ್ ನಿರ್ಮಾಣ, ಸ್ಮಶಾನಗಳ ಅಭಿವೃದ್ಧಿ, ತಾರಸಿ ಉದ್ಯಾನವನ, ಪೌರಸನ್ಮಾನ ಕಾರ್ಯಕ್ರಮ, ಪುಟ್ಟಣ ಕಣಗಾಲ್ ವಾದ್ಯ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಮೇಯರ್ ಕಪ್, ಕ್ರೀಡಾಚಟುವಟಿಕೆಗಳಿಗೆ ಕ್ರಿಯಾ ಯೋಜನೆ, ಒಳಾಂಗಣ ಕ್ರೀಡಾಂಗಣ, ಆಶ್ರಯ ವಸತಿ ಯೋಜನೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಸಭೆಯಲ್ಲಿ ಪಾಲಿಕೆ ಉಪಮೇಯರ್ ಗಾಯತ್ರಿ ಖಂಡೋಜಿರಾವ್, ಸದಸ್ಯರಾದ ಅಬ್ದುಲ್ ಲತೀಫ್, ಉದಯಕುಮಾರ್, ರಾಕೇಶ್ ಜಾಧವ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications