ದಾವಣಗೆರೆ: ಮಾಸ್ಕ್ ಧರಿಸದ ಪೊಲೀಸ್ ಗೆ ಸ್ಥಳದಲ್ಲೇ 200ರೂ. ದಂಡ
ದಾವಣಗೆರೆ, ಜೂನ್ 18: ಕೊರೊನಾ ವೈರಸ್ ಹರಡುವಿಕೆ ವಿರುದ್ಧ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ರಾಜ್ಯ ಸರ್ಕಾರದಿಂದ ಇಂದು ಮಾಸ್ಕ್ ಡೇ ಆಚರಣೆ ಮಾಡಲಾಗಿದೆ.
ಮಾಸ್ಕ್ ದಿನಾಚರಣೆಯ ದಿನದಂದೇ ಮಾಸ್ಕ್ ಧರಿಸದ ಪೊಲೀಸರೋಬ್ಬರಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಸ್ಥಳದಲ್ಲೇ 200 ರೂ. ದಂಡ ವಿಧಿಸಿದ್ದಾರೆ.
ದಾವಣಗೆರೆ: ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಇಂದು ಬೆಳಿಗ್ಗೆ ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಮಾಸ್ಕ್ ಡೇಗೆ ಚಾಲನೆ ನೀಡಲಾಗಿತ್ತು. ಈ ವೇಳೆ ಮಾಸ್ಕ್ ಧರಿಸದ ಪೊಲೀಸರೊಬ್ಬರನ್ನು ಗಮನಿಸಿ ಅವರಿಗೆ ದಂಡ ವಿಧಿಸಿದರು. ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಬೇಕಾದ ಪೊಲೀಸರೇ ಮಾಸ್ಕ್ ಇಲ್ಲದೆ ಕರ್ತವ್ಯಕ್ಕೆ ಹಾಜರಾಗಿದ್ದರು.
ಈ ಸಂದರ್ಭದಲ್ಲಿ ವಾದ ಮಾಡಿದ ಪೊಲೀಸ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಖಡಕ್ ಎಚ್ಚರಿಕೆ ನೀಡಿದರು ಹಾಗೂ ಮಾಸ್ಕ್ ಧರಿಸದೇ ಇದ್ದವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದರು.