ಮುದ್ದಿನ ಮಗು ಕಳೆದುಕೊಂಡಿದ್ದಕ್ಕೆ ಮನನೊಂದ ತಾಯಿ ಆತ್ಮಹತ್ಯೆ
ದಾವಣಗೆರೆ, ಜನವರಿ 01: ತನ್ನ ಮಗು ಸಾವಿನಿಂದ ಮನನೊಂದ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಹರಿಹರ ತಾಲೂಕಿನ ಗುಡ್ಡದ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ (28) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮಂಜುನಾಥ್ ಹಾಗೂ ಜ್ಯೋತಿ ಸುಖವಾದ ಸಂಸಾರ ನಡೆಸುತ್ತಿದ್ದರು. ಅವರಿಗೆ ಒಂದು ವರ್ಷದ ಹೆಣ್ಣು ಮಗುವೂ ಇತ್ತು. ಆದರೆ ಮೂರು ತಿಂಗಳ ಹಿಂದೆ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು. ತಮ್ಮ ಪ್ರೀತಿಯ ಮಗು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆಯಿಂದ ಮನನೊಂದಿದ್ದ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.