ಕೇಂದ್ರ ಸಚಿವ ಸುರೇಶ್ ಅಂಗಡಿಯಿಂದ ಸಾಮಾಜಿಕ ಅಂತರ ಉಲ್ಲಂಘನೆ
ದಾವಣಗೆರೆ, ಜೂನ್ 26: ದಾವಣಗೆರೆಯ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡುವ ವೇಳೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯಿಂದ ಸಾಮಾಜಿಕ ಅಂತರ ಉಲ್ಲಂಘನೆಯಾಗಿದೆ.
Recommended Video
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸೇರಿ ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಗುಂಪು ಗುಂಪಾಗಿ ಸೇರಿದ್ದಾರೆ. ಕೊರೊನಾ ವೈರಸ್ ಹಾಟ್ ಸ್ಪಾಟ್ ನಗರದಲ್ಲಿಯೇ ಈ ಘಟನೆ ನಡೆದಿದೆ.
ರೈಲ್ವೆ ನಿಲ್ದಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಕಾಮಗಾರಿಯ ವೇಗ ಮತ್ತು ಗುಣಮಟ್ಟವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ರೈಲ್ವೆ ನಿಲ್ದಾಣ ಕಾಮಗಾರಿ ವೀಕ್ಷಣೆಯಲ್ಲಿ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಕೂಡ ಭಾಗಿಯಾಗಿದ್ದರು.

ಇದೇ ಸಂದರ್ಭದಲ್ಲಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನಕ್ಕೆ ರೆಕಮೆಂಡ್ ಮಾಡ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ, ಅದು ಮುಖ್ಯಮಂತ್ರಿ ವ್ಯಾಪ್ತಿಗೆ ಸೇರಿದ್ದು, ಅವರ ವಿವೇಚನೆ ಬಿಟ್ಟ ವಿಚಾರವೆಂದು ಜಾರಿಕೊಂಡರು.

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಅದು ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಬಿಟ್ಟದ್ದು, ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಆಧರಿಸಿ ನಿರ್ಧರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದರು.












Click it and Unblock the Notifications