ದಾವಣಗೆರೆ ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ಡಿಸಿ ಮಾಹಿತಿ
ದಾವಣಗೆರೆ, ಡಿಸೆಂಬರ್ 02: ದಾವಣಗೆರೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಇಡೀ ಜಿಲ್ಲೆಯಲ್ಲಿ 191 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದಲ್ಲಿ 89 ಗ್ರಾಮ ಪಂಚಾಯಿತಿಗಳಿಗೆ ಹಾಗೂ ಎರಡನೇ ಹಂತದಲ್ಲಿ 102 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.
ಚುನಾವಣೆ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆ ಘೋಷಿಸಿದ ಹಿನ್ನೆಲೆ ದಾವಣಗೆರೆಯಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದರು.
ಗ್ರಾ.ಪಂ. ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೊಟ್ಟ ಮಲೆನಾಡಿಗರು
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 42,3482 ಪುರುಷರು, 41,4,243 ಮಹಿಳೆಯರು, ಒಟ್ಟು 8,37,727 ಮತದಾರರು ಮತದಾನ ಮಾಡಲಿದ್ದಾರೆ. ಶಾಂತಿ ಹಾಗೂ ಸುವ್ಯವಸ್ಥೆ ಬಗ್ಗೆ ಅಧಿಕಾರಿಗಳ ಜೊತೆ ಈಗಾಗಲೇ ಸಭೆ ನಡೆಸಿದ್ದು, ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳ ಮೇಲೆ ಎಸ್ಪಿ ವಿಶೇಷ ಗಮನ ಹರಿಸಲಿದ್ದಾರೆ ಎಂದರು.
ಚುನಾವಣೆ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲಾಗಿದೆ. ಕೋವಿಡ್ ನಿಯಮಾವಳಿ ಹಾಗೂ ನೀತಿ ಸಂಹಿತೆ ನಿರ್ದೇಶನ ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.