ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯ ಎಸ್.ಎಸ್ ಹೈಟೆಕ್ ಆಸ್ಪತ್ರೆಗೆ ಜಿಲ್ಲಾಧಿಕಾರಿ‌ ದಿಢೀರ್ ಭೇಟಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ 6: ಎಸ್.ಎಸ್ ಹೈಟೆಕ್ ಆಸ್ಪತ್ರೆಗೆ ದಾವಣಗೆರೆ ಜಿಲ್ಲಾಧಿಕಾರಿ‌ ಮಹಾಂತೇಶ್ ಆರ್.ಬೀಳಗಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಎಂಐಸಿಯು, ಐಸೋಲೇಷನ್ ಹಾಗೂ ಐಸಿಯು ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು.

ಎಸ್.ಎಸ್ ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್ ಗಳನ್ನು ನೀಡಬೇಕು. ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಸವಲತ್ತುಗಳ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್ ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.

Davanagere: DC Mahantesh Bilagi Visits SS Hi-Tech Hospital

ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆಯಿಂದ ಕೂಡಿರಬೇಕು. ಎಲ್ಲಾ ವಾರ್ಡ್‌ಗಳನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಜಿಲ್ಲಾಸ್ಪತ್ರೆಯಿಂದ ರೆಫರ್ ಮಾಡಿದ ಕೋವಿಡ್ ಸೋಂಕಿತ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ತೆರೆಯಲು ನಗರದ ಇಎಸ್ಐ ಆಸ್ಪತ್ರೆಯಲ್ಲಿ 80 ಬೆಡ್ ವ್ಯವಸ್ಥೆಯುಳ್ಳ ಕೋವಿಡ್ ಸೆಂಟರ್ ತೆರೆಯುವ ಬಗ್ಗೆ ಪರಿಶೀಲಿಸಿ ವೈದ್ಯರೊಂದಿಗೆ ಮಹಾಂತೇಶ ಬೀಳಗಿ ಚರ್ಚೆ ನಡೆಸಿದರು.

Davanagere: DC Mahantesh Bilagi Visits SS Hi-Tech Hospital

ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಇಎಸ್ಐ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಮತ್ತು 40 ಐಸೊಲೇಶನ್ ಬೆಡ್ ಸೇರಿದಂತೆ ಒಟ್ಟು 80 ಬೆಡ್ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲು ಬೇಕಾದ ಅಗತ್ಯತೆಗಳ ಬಗ್ಗೆ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.

Davanagere: DC Mahantesh Bilagi Visits SS Hi-Tech Hospital

Recommended Video

ಸತತ ಮೂರನೇ ದಿನವೂ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ಬೆಲೆ.. | Oneindia Kannada

ಆಸ್ಪತ್ರೆಗೆ 100 ಜಂಬೋ ಸಿಲಿಂಡರ್ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಹಿಸಲಾಗುವುದು. ಆಸ್ಪತ್ರೆಗೆ ಬೇಕಾದ 70 ಮಂಚಗಳನ್ನು ಹೊರಗಡೆಯಿಂದ ತರಿಸುತ್ತೇವೆ. ಕಾಟನ್ ಬೆಡ್, ಫ್ಯಾನ್, ಐವಿ ಡ್ರಿಪ್, ಆಕ್ಸಿಜನ್ ಸಿಲಿಂಡರ್, ಬಿಪಿ ಆಪರೇಟರ್ಸ್ ಗಳನ್ನು ದಾನಿಗಳಿಂದ ಪೂರೈಸುತ್ತೇವೆ. ಅಲ್ಲದೇ ಆಸ್ಪತ್ರೆಗೆ ಬೇಕಾದ ಟ್ರಾಲಿಗಳು, ವ್ಹೀಲ್‍ಚೇರ್‍ಗಳು, ಐವಿ ಸ್ಟ್ಯಾಂಡ್ ಇತರೆ ಸವಲತ್ತುಗಳ ಕುರಿತು ಮಾಹಿತಿ ನೀಡಿದರೆ ಜಿಲ್ಲಾಡಳಿತದಿಂದ ಪೂರೈಸುತ್ತೇವೆ ಎಂದರು.

English summary
Davanagere District Collector Mahantesh R. Bilagi visits SS Hi-Tech Hospital to inspect on covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X