ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಟಿಬಿ, ವಿಶ್ವನಾಥ್ ಗೆ ಸಚಿವ ಸ್ಥಾನ; ಭೈರತಿ ಬಸವರಾಜ್ ಅಭಿಪ್ರಾಯ...

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ನವೆಂಬರ್ 13: ಎಂಟಿಬಿ ನಾಗರಾಜ್, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಈ ವಿಚಾರದಲ್ಲಿ ಸಿಎಂ ಅವರದ್ದೇ ಪರಮಾಧಿಕಾರ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಶುಕ್ರವಾರ ಚನ್ನಗಿರಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನೀಡಿರುವ ಭರವಸೆ ಈಡೇರಿಸುತ್ತಾರೆ ಎಂಬ ನಂಬಿಕೆ ಇದೆ. ಈ ವಿಚಾರದಲ್ಲಿ ಮಾತು ತಪ್ಪಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಕಾರಣರಾದ ಸಿ.ಪಿ.ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಡಿಯೂರಪ್ಪ ಅವರ ನಿರ್ಧಾರವೇ ಅಂತಿಮ ಎಂದರು.

Davanagere: Decision Regarding Giving Minister Post Is Upto CM Said Bhyrathi Basavaraj

 ಮಂತ್ರಿ ಸ್ಥಾನಕ್ಕಾಗಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಲ್ಲಿ ಭಾರಿ ಪೈಪೋಟಿ ಮಂತ್ರಿ ಸ್ಥಾನಕ್ಕಾಗಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಲ್ಲಿ ಭಾರಿ ಪೈಪೋಟಿ

Recommended Video

ರವಿ ಬೆಳಗೆರೆ ಮಾಡಿದ ಸಹಾಯವನ್ನು ನೆನಪಿಸಿಕೊಂಡ R ಅಶೋಕ್ | Oneindia Kannada

ಪ್ರತಿ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ನ್ಯಾಯ ಸಮ್ಮತವಾಗಿದೆ, ಇದರಲ್ಲಿ ತಪ್ಪೇನಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಎಂ.ಪಿ. ರೇಣುಕಾಚಾರ್ಯ, ಎಸ್.ಎ.ರವೀಂದ್ರನಾಥ್ ಸೇರಿದಂತೆ ಐವರು ಶಾಸಕರಿದ್ದಾರೆ. ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಆಗ್ರಹ ಸರಿಯಾಗಿದೆ. ಈ ಸಂಬಂಧ ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ನಾನು, ಸಿಎಂ ಜೊತೆ ಮಾತುಕತೆ ನಡೆಸಿ ಒತ್ತಡ ಹೇರಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

English summary
The decision regarding giving minister post to MTB Nagaraj and Vishwanath is upto cm yediyurappa, said urban development minister Bhyrathi Basavaraj
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X