ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನೆರಡು ದಿನದಲ್ಲಿ ದಾವಣಗೆರೆ ಲಾಕ್ ಡೌನ್ ಆಗುತ್ತಾ?; ಡಿಸಿ ಉತ್ತರ ಹೀಗಿದೆ...

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 14: ದಾವಣಗೆರೆ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕಾ ಬೇಡವಾ ಎಂಬ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Recommended Video

Swathi Radar ಎಂದರೇನು ? | Oneindia Kannada

ಸದ್ಯಕ್ಕೆ ಜಿಲ್ಲೆಯ ಕೊರೊನಾ ಸೋಂಕಿನ ಪ್ರಕರಣಗಳ ಸ್ಥಿತಿಗತಿಯ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾಗಿ ತಿಳಿಸಲಾಗಿದೆ. ಎಲ್ಲರ ಜೊತೆ ಚರ್ಚಿಸಿ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಿ ಎಂದು ಮುಖ್ಯಮಂತ್ರಿಗಳು ತಿಳಿಸಿರುವುದಾಗಿ ಮಾಹಿತಿ ನೀಡಿದರು.

Decision Will Be Taken Within 2 Days Regarding Lockdown In Davangere

 ಬೆಂಗಳೂರಿನಿಂದ ಬರುವವರ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿ ಸೂಚನೆ ಬೆಂಗಳೂರಿನಿಂದ ಬರುವವರ ಬಗ್ಗೆ ದಾವಣಗೆರೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಉಸ್ತುವಾರಿ ಸಚಿವ, ಸಂಸದ, ಶಾಸಕರ ಜೊತೆ ಚರ್ಚಿಸಿ ಇನ್ನೆರಡು ದಿನಗಳಲ್ಲಿ ಲಾಕ್ ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ 81 ಕಂಟೈನ್ಮೆಂಟ್ ಝೋನ್ ಗಳಿವೆ. ಈ ಪ್ರದೇಶದ ಜನರ ಆರೋಗ್ಯ ಸಮೀಕ್ಷೆಗೆ ಸಿಎಂ ಸೂಚಿಸಿದ್ದಾರೆ. ನಾವು ಬದಲಾದರೆ ಮಾತ್ರ ಸಮಾಜ‌ ಬದಲಾಗುತ್ತೆ ಎಂದು ಜನರು ಮೊದಲು ಅರ್ಥ ಮಾಡಿಕೊಳ್ಳಬೇಕು. ಆಗ‌ ಮಾತ್ರ ಕೊರೊನಾ ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿ ಹೇಳಿದರು.

ಇನ್ನೆರಡು ದಿನಗಳಲ್ಲಿ ದಾವಣಗೆರೆ ಲಾಕ್ ಡೌನ್ ಆಗುತ್ತದೋ ಇಲ್ಲವೋ ತಿಳಿಯಲಿದೆ.

English summary
"The decision on whether to lock down or not in Davanagere district will be taken in two days," informed DC Mahantesh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X