ದಾವಣಗೆರೆ ಜಿ.ಪಂ ನೂತನ ಅಧ್ಯಕ್ಷರಾಗಿ ದೀಪಾ ಜಗದೀಶ್ ಆಯ್ಕೆ
ದಾವಣಗೆರೆ. ಜೂನ್ 12: ದಾವಣಗೆರೆ ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷೆಯಾಗಿ ದೀಪಾ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿ.ಪಂ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ 9.30 ರಿಂದ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಿಜೆಪಿ ಪಕ್ಷದ ಜಿ.ಪಂ ಸದಸ್ಯೆ ದೀಪಾ ಜಗದೀಶ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ವಿ.ಪಿ ಇಕ್ಕೇರಿ ಅಧ್ಯಕ್ಷರ ಆಯ್ಕೆಯನ್ನು ಘೋಷಿಸಿದರು.

ದೀಪಾ ಜಗದೀಶ್ ಹೊನ್ನಾಳಿ ತಾಲ್ಲೂಕಿನ ಕುಂದೂರು ಜಿ.ಪಂ ಕ್ಷೇತ್ರದ ಸದಸ್ಯೆಯಾಗಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಹೆಚ್ಚುವರಿ ಜಿಲ್ಲಾಧಿಕಾರಿ ವೀರಮಲ್ಲಪ್ಪ, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ ಹಾಗೂ ಜಿ.ಪಂ ಸದಸ್ಯರು ಉಪಸ್ಥಿತರಿದ್ದರು.












Click it and Unblock the Notifications