ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹ
ದಾವಣಗೆರೆ, ಡಿಸೆಂಬರ್ 8; ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಇಟ್ಟಿದ್ದು, ಪಂಚಲಕ್ಷ ಹೆಜ್ಜೆ ಪಾದಯಾತ್ರೆ ನಡೆಸಲಾಗುವುದು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ನಡೆದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಮುಖಂಡರ ಸಭೆಯ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು 2ಎ ಮೀಸಲಾತಿ ಸಿಗಬೇಕೆಂದು ಹೋರಾಟ ಮಾಡುತ್ತಿದ್ದು, ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಸಮಾಜದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈ ವರ್ಷದ ಅಂತ್ಯದೊಳಗೆ ಸರ್ಕಾರದ ನಿರ್ಧಾರ ಪ್ರಕಟಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಸರ್ಕಾರ ಇದಕ್ಕೆ ಮಣಿಯದಿದ್ದರೆ ಫೆಬ್ರವರಿಯಲ್ಲಿ ಕೂಡಲ ಸಂಗಮದಿಂದ ಬೆಂಗಳೂರಿಗೆ ಪಂಚಲಕ್ಷ ಹೆಜ್ಜೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದರು.

ಈ ವೇಳೆ ಸಮಾಜ ಎಲ್ಲರೂ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಬೇಕೆಂದು ತೀರ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮೇಯರ್ ಅಜಯ್ ಕುಮಾರ್, ಸಮಾಜದ ಮುಖಂಡರಾದ ಎಚ್ ಎಸ್ ನಾಗರಾಜು, ಸುಭಾಷ್ ಚಂದ್ರ, ಹುಚ್ಚಪ್ಪ ಮಾಸ್ಟರ್, ಶ್ರೀಧರ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications