ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 8; ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಇಟ್ಟಿದ್ದು, ಪಂಚಲಕ್ಷ ಹೆಜ್ಜೆ ಪಾದಯಾತ್ರೆ ನಡೆಸಲಾಗುವುದು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ನಡೆದ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಮುಖಂಡರ ಸಭೆಯ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಜಗದ್ಗುರು ಜಯಮೃತ್ಯುಂಜಯ ಶ್ರೀಗಳು 2ಎ ಮೀಸಲಾತಿ ಸಿಗಬೇಕೆಂದು ಹೋರಾಟ ಮಾಡುತ್ತಿದ್ದು, ಈ ಹಿನ್ನೆಲೆ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಸಮಾಜದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಎಸ್ಟಿಗೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ಜ.15ರಿಂದ ಪಾದಯಾತ್ರೆಎಸ್ಟಿಗೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ಜ.15ರಿಂದ ಪಾದಯಾತ್ರೆ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕುರಿತು ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈ ವರ್ಷದ ಅಂತ್ಯದೊಳಗೆ ಸರ್ಕಾರದ ನಿರ್ಧಾರ ಪ್ರಕಟಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಸರ್ಕಾರ ಇದಕ್ಕೆ ಮಣಿಯದಿದ್ದರೆ ಫೆಬ್ರವರಿಯಲ್ಲಿ ಕೂಡಲ ಸಂಗಮದಿಂದ ಬೆಂಗಳೂರಿಗೆ ಪಂಚಲಕ್ಷ ಹೆಜ್ಜೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದರು.

 Davanagere: Demand For 2A Reservation To Panchamasali Community

Recommended Video

Sanju samson ಹಾಗು Steven Smith ಕ್ಷೇತ್ರರಕ್ಷಣೆಯಲ್ಲಿ ನಂಬರ್ 1 | Oneindia Kannada

ಈ ವೇಳೆ ಸಮಾಜ ಎಲ್ಲರೂ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಬೇಕೆಂದು ತೀರ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮೇಯರ್ ಅಜಯ್ ಕುಮಾರ್, ಸಮಾಜದ ಮುಖಂಡರಾದ ಎಚ್ ಎಸ್ ನಾಗರಾಜು, ಸುಭಾಷ್ ಚಂದ್ರ, ಹುಚ್ಚಪ್ಪ ಮಾಸ್ಟರ್, ಶ್ರೀಧರ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

English summary
Kudalasangama Basava Jayamrutyunjaya swamiji demanded 2a reservation for panchamasali community
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X