ದಾವಣಗೆರೆ ಸ್ಲಂಗಳಿಗೆ 13 ಸಾವಿರ ಲೀ ಉಚಿತ ಹಾಲು ವಿತರಣೆ
ದಾವಣಗೆರೆ, ಏಪ್ರಿಲ್ 03: ಸ್ಲಂ ನಿವಾಸಿಗಳಿಗೆ ಇಂದಿನಿಂದ ಏ.14 ರವರೆಗೆ ದಾವಣಗೆರೆ ಮಹಾನಗರ ಪಾಲಿಕೆಯಿಂದ ಒಂದು ಲೀಟರ್ ಉಚಿತ ಹಾಲು ವಿತರಣೆಗೆ ಚಾಲನೆ ನೀಡಲಾಗಿದೆ.
ದಾವಣಗೆರೆ ನಗರದಲ್ಲಿ ಒಟ್ಟಾರೆ 50 ಸ್ಲಂಗಳಿದ್ದು, 12,951 ಮನೆಗಳಿವೆ. ಇಂದಿನಿಂದ ಏ.14 ರವರೆಗೆ ನಿರಂತರವಾಗಿ ಪ್ರತಿ ಮನೆಗೂ 1 ಲೀ. ಹಾಲಿನಂತೆ 13 ಸಾವಿರ ಲೀ ಪೂರೈಕೆ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಹೇಳಿದರು.
ಇಂದು ಬೆಳಿಗ್ಗೆ ದಾವಣಗೆರೆಯ ನಿಟುವಳ್ಳಿ, ಕುಂದವಾಡ, ಶಾಮನೂರು, ಲೆನಿನ್ ನಗರ, ಆವರಗೆರೆ ಗೋಮಾಳ, ನೀಲಮ್ಮನ ತೋಟ, ಶ್ರೀರಾಮ ನಗರ, ಅಂಬೇಡ್ಕರ್ ನಗರ ಸೇರಿದಂತೆ ಸುಮಾರು 11 ಸ್ಲಂ ನಿವಾಸಿಗಳಿಗೆ 2495 ಲೀ.ಹಾಲು ಪೂರೈಕೆ ಮಾಡಲಾಗಿದೆ.

ಇಂದಿನಿಂದ ಹಾಲು ವಿತರಣೆ ಕಾರ್ಯ ಪ್ರಾರಂಭಗೊಂಡಿರುವುದರಿಂದ ಒಂದೇ ವೇಳೆ ಸಮರ್ಪಕವಾಗಿ ಎಲ್ಲಾ ಸ್ಲಂ ನಿವಾಸಿಗಳಿಗೆ ಪೂರೈಕೆ ಸಾಧ್ಯವಾಗಿಲ್ಲ. ಆದ್ದರಿಂದ ಮಧ್ಯಾಹ್ನ ಕೆಲ ಭಾಗಗಳಿಗೆ ತೆರಳಿ ವಿತರಣೆ ಮಾಡಲಾಗುವುದು. ನಾಳೆಯಿಂದ ಮಹಾನಗರ ಪಾಲಿಕೆ ವತಿಯಿಂದ ತಂಡ ರಚನೆ ಮಾಡಿ ಬೆಳಗ್ಗೆ 6 ರಿಂದ 10 ಗಂಟೆಯೊಳಗಾಗಿ ಎಲ್ಲಾ ಸ್ಲಂಗಳಲ್ಲೂ ಸಮರ್ಪಕವಾಗಿ 1 ಲೀ ಹಾಲು ವಿತರಿಸಲಿದ್ದೇವೆ ಎಂದು ಅಯುಕ್ತ ಮಾಹಿತಿ ನೀಡಿದರು.
ಮಹಾನಗರ ಪಾಲಿಕೆಯಿಂದ ಈ ಕಾರ್ಯ ನಿರಂತರವಾಗಿ ಏ.14 ರವರೆಗೆ ಮುಂದುವರೆಯಲಿದೆ ಎಂದು ತಿಳಿಸಿದರು. ಈ ವೇಳೆ ಮೇಯರ್ ಬಿ.ಜಿ ಅಜಯ್ ಕುಮಾರ್, ಪಾಲಿಕೆ ಆರೋಗ್ಯ ಅಧಿಕಾರಿಗಳು ಹಾಲು ವಿತರಣೆ ಕಾರ್ಯದಲ್ಲಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications