ಚೀನಾ ವಸ್ತುಗಳ ನಿಷೇಧಕ್ಕೆ ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ದಾವಣಗೆರೆ, ಜುಲೈ 11: ಕೇಂದ್ರ ಸರ್ಕಾರವು ಚೀನಾ ವಸ್ತುಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
Recommended Video
ಗುಂಡಿ ವೃತ್ತದಲ್ಲಿ ಜಮಾಯಿಸಿದ್ದ ಪಕ್ಷದ ಮುಖಂಡರು, ಕಾರ್ಯಕರ್ತರು, ಜನಪ್ರತಿನಿಧಿಗಳು ಚೀನಾ ವಸ್ತುಗಳನ್ನು ರಸ್ತೆ ಮೇಲೆ ಹಾಕಿ ನಾಶಪಡಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಮಾತನಾಡಿ, ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ವಸ್ತುಗಳನ್ನು ನಾವೆಲ್ಲ ಉಪಯೋಗಿಸಬೇಕು. ಚೀನಾ ವಸ್ತುಗಳ ಆಮದು ನಿಷೇಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಮಾಜಿ ನಗರಸಭಾಧ್ಯಕ್ಷ ಕೆ.ಜಿ. ಶಿವಕುಮಾರ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಅನಿತಾ ಬಾಯಿ ಮಾಲತೇಶ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಮುಖಂಡರಾದ ದಾದಾಪೀರ್, ಕೆಎಲ್ ಹರೀಶ್ ಬಸಾಪುರ, ಮುಜಾಹಿದ್, ಶಶಿಧರ್ ಪಾಟೀಲ್, ಹಾಲೇಶ್, ಪ್ರವೀಣ್ ಕುಮಾರ್, ಲಿಯಾಖತ್ ಅಲಿ, ಯುವರಾಜ್, ರಾಕೇಶ್ ಹಾಗೂ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.












Click it and Unblock the Notifications