• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ ತಾಲೂಕುವಾರು ಮಳೆ ಪ್ರಮಾಣ, ಲಕ್ಷಾಂತರ ಆಸ್ತಿ ನಷ್ಟ

|

ದಾವಣಗೆರೆ, ಸೆ.4: ದಾವಣಗೆರೆ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 23.0 ಮಿ.ಮೀ ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

   BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

   ಚನ್ನಗಿರಿ ತಾಲ್ಲೂಕಿನಲ್ಲಿ 3.0 ವಾಡಿಕೆಗೆ 22.0 ಮಿ.ಮೀ. ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 1.0 ವಾಡಿಕೆಗೆ 22.0 ಮಿ.ಮೀ. ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 17.0 ಮಿ.ಮೀ. ವಾಸ್ತವ ಮಳೆಯಾಗಿದೆ.

   ದಾವಣಗೆರೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ, ಐದು ವಾರಗಳ ವಾರದ ಸಂತೆ

   ಹೊನ್ನಾಳಿ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 29.0 ಮಿ.ಮೀ. ವಾಸ್ತವ ಮಳೆಯಾಗಿದೆ. ಜಗಳೂರು ತಾಲ್ಲೂಕಿನಲ್ಲಿ 1.0 ವಾಡಿಕೆಗೆ 17.0 ಮಿ.ಮೀ. ವಾಸ್ತವ ಮಳೆಯಾಗಿದೆ.

   ನ್ಯಾಮತಿ ತಾಲ್ಲೂಕಿನಲ್ಲಿ 2.0 ವಾಡಿಕೆಗೆ 36.0 ಮಿ.ಮೀ. ವಾಸ್ತವ ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 2.0 ವಾಡಿಕೆಗೆ 23.0 ಮಿ.ಮೀ ವಾಸ್ತವ ಮಳೆಯಾಗಿದೆ.

   ದಾವಣಗೆರೆ ತಾಲ್ಲೂಕಿನಲ್ಲಿ 3 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ. 30 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಹಾಗೂ 2 ಎಕರೆ ಬೆಳೆ ಹಾನಿಯಾಗಿದ್ದು ರೂ. 25 ಸಾವಿರ ಸೇರಿದಂತೆ ಒಟ್ಟು ರೂ.55 ಸಾವಿರ ನಷ್ಟ ಸಂಭವಿಸಿರುತ್ತದೆ.

   ಹರಿಹರ ತಾಲ್ಲೂಕಿನಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ. 90 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. ಹೊನ್ನಾಳಿ ತಾಲ್ಲೂಕಿನಲ್ಲಿ 9 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು 4.50 ಲಕ್ಷ ನಷ್ಟ ಸಂಭವಿಸಿರುತ್ತದೆ.

   ಚನ್ನಗಿರಿ ತಾಲ್ಲೂಕಿನಲ್ಲಿ 3 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು 1.10 ಲಕ್ಷ ನಷ್ಟ ಹಾಗೂ .3 ಕಚ್ಚಾ ಮನೆ ಹಾನಿಯಾಗಿದ್ದು ರೂ. 75 ಸಾವಿರ ಹಾಗೂ 6 ಎಕರೆ ಮೆಕ್ಕೆಜೋಳ ಹಾನಿಯಾಗಿದ್ದು ರೂ. 80 ಸಾವಿರ ಸೇರಿಂದತೆ ಒಟ್ಟು ರೂ. 2.65 ಲಕ್ಷ ನಷ್ಟ ಸಂಭವಿಸಿರುತ್ತದೆ.

   ಜಗಳೂರು ತಾಲ್ಲೂಕಿನಲ್ಲಿ 5 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು ರೂ. 15 ಸಾವಿರ ನಷ್ಟ ಹಾಗೂ 14 ಎಕರೆ ಮೆಕ್ಕೆಜೋಳ ಹಾಗೂ 36 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದ್ದು ಒಟ್ಟು ರೂ. 55 ಸಾವಿರ ನಷ್ಟ ಸಂಭವಿಸಿರುತ್ತದೆ.

   ದಾವಣಗೆರೆ ಜಿಲ್ಲೆಯಲ್ಲಿ ಒಟ್ಟಾರೆ ರೂ. 9.15 ಲಕ್ಷ ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಮಾಹಿತಿ ಕೃಪೆ: ವಾರ್ತಾ ಇಲಾಖೆ)

   English summary
   Heavy rainfall recorded in Davanagere district, due to heavy rain an estimation of 9.15 lakh worth properties damaged across the district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X