Breaking: ದಾವಣಗೆರೆ ಜಿಲ್ಲಾ ಆಸ್ಪತ್ರೆ ವೈದ್ಯ ನೇಣಿಗೆ ಶರಣು
ದಾವಣಗೆರೆ, ಜೂನ್ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್‌ನಲ್ಲಿನ ಎ ಬ್ಲಾಕ್‌ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.

ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್‌ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್‌ಎಸ್‌ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications