ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್
ಬಿ.ಎಸ್. ಯಡಿಯೂರಪ್ಪನವರು ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ದಾವಣಗೆರೆಯಲ್ಲಿ ಸ್ಪಷ್ಟಪಡಿಸಿದರು.
ದಾವಣಗೆರೆ, ಮಾರ್ಚ್, 16: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಮ್ಮ ಸರ್ವೋಚ್ಛ ನಾಯಕರಾಗಿದ್ದಾರೆ. ವಿಧಾನಸಭೆ ಚುನಾವಣೆಯನ್ನು ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಎದುರಿಸಲಿದೆ. ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದಾವಣಗೆರೆಯಲ್ಲಿ ಸ್ಪಷ್ಟಪಡಿಸಿದರು.
ನಾರಾಯಣಗೌಡ ಬಿಜೆಪಿ ತೊರೆಯುವುದಿಲ್ಲ
ಜಿಎಂಐಟಿಯ ಸಮೀಪದಲ್ಲಿ ಮಹಾಸಂಗಮ ಕಾರ್ಯಕ್ರಮದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಚಿವರಾದ ವಿ.ಸೋಮಣ್ಣ ಹಾಗೂ ನಾರಾಯಣಗೌಡ ಬಿಜೆಪಿ ತೊರೆಯುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ವಿರುದ್ಧ ಕಟೀಲ್ ವಾಗ್ದಾಳಿ
ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಪ್ರಯುಕ್ತ ಸಿದ್ದರಾಮೋತ್ಸವ ನಡೆಸಲಾಯಿತು. ರಾಜ್ಯದಿಂದ 3 ಲಕ್ಷ ಮಂದಿ ಕರೆತಂದು 6 ಲಕ್ಷ ಜನರು ಸೇರಿದ್ದರು ಎಂದು ಹೇಳಿಕೊಳ್ಳುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ನಾಲ್ಕು ಜಿಲ್ಲೆಗಳಿಂದ ಜನರನ್ನು ಕರೆತರುವಂತೆ ಸೂಚನೆ ನೀಡಲಾಗಿದೆ. ಅಲ್ಲಿನ ಶಾಸಕರು ಹಾಗೂ ಸಂಸದರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದರು.
ಜನರಿಗೆ ಮೋದಿ ಅಂದರೆ ತುಂಬಾ ಪ್ರೀತಿ
ಮಂಡ್ಯದಲ್ಲಿ ಮೋದಿ ಸಮಾವೇಶಕ್ಕೆ ಜನರು ಸೇರುತ್ತಾರೋ ಇಲ್ಲವೋ ಎನ್ನುವ ಆತಂಕ ಇತ್ತು. ಆದರೆ ಮನೆಯಿಂದ ಜನರು ಮೋದಿ ಬರ್ತಾರಂತ ಓಡೋಡಿ ಬಂದರು. ಅಲ್ಲಿ ನಮಗೂ ನಿಲ್ಲಲು ಜಾಗ ಇರಲಿಲ್ಲ. ಮೋದಿ ಅಂದರೆ ಜನರಿಗೆ ತುಂಬಾನೇ ಪ್ರೀತಿ. ಅವರು ಎಲ್ಲರ ಭಾವನೆಯಲ್ಲಿಯೂ ಬೆರೆತು ಹೋಗಿದ್ದಾರೆ. ಹಾಗೆಯೇ ದಾವಣಗೆರೆಯಲ್ಲಿ ಮಹಾಸಂಗಮ ಐತಿಹಾಸಿಕ ಕಾರ್ಯಕ್ರಮ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳಲ್ಲಿ ಗೆಲ್ಲಲಿದ್ದೇವೆ. ಯಾವುದೇ ಅನುಮಾನ ಬೇಡ ಎಂದು ವಿಶ್ವಾಸ
ವ್ಯಕ್ತಪಡಿಸಿದರು.
ವಿಜಯಸಂಕಲ್ಪ ಯಾತ್ರೆ ವೇಳೆ ಹೆಚ್ಚಿನ ಜನ ಸೇರುತ್ತಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿಗೆ ಧ್ವನಿಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿ. ಅವರ ಒಳಜಗಳ ಬೀದಿಗೆ ಬರುವುದನ್ನು ನೋಡಲು ಕಾಯುತ್ತಿದ್ದೇವೆ. ಹೋರಾಟ, ಕಣ್ಣೀರು, ಗಲಾಟೆಗಳು ಕೂಡ ನಡೆಯುತ್ತವೆ. ಬೇರೆ ಪಕ್ಷಗಳ ಶಾಸಕರಿಗೆ ಗಾಳ ಹಾಕುವ ಪ್ರಮೇಯ ಎದುರಾಗಿಲ್ಲ.

ಹಾಗೆಯೇ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದಿಲ್ಲ. ಹಾಗೂ ಸಂಸದರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆಯೋ ಇಲ್ಲವೋ ಎಂಬುದು ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದರು. ಹಾಗೆಯೇ ಹಾಸನಕ್ಕೆ ಜೆಡಿಎಸ್ ಸೀಮಿತವಾಗಿದೆ. ಇಲ್ಲಿಯೇ ಎಂಜಿನ್ ಸೀಜ್ ಆಗಿದೆ. 20ಕ್ಕಿಂತ ಕಡಿಮೆ ಸ್ಥಾನಗಳಲ್ಲಿ ಅಷ್ಟೇ ಗೆಲ್ಲುತ್ತದೆ. ಇನ್ನು ಕಾಂಗ್ರೆಸ್ ಪಕ್ಷ 75 ಸ್ಥಾನಗಳನ್ನು ದಾಟುವುದಿಲ್ಲ ಎಂದು ಭವಿಷ್ಯ ನುಡಿದರು.












Click it and Unblock the Notifications