ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕೋವಿಡ್ ಬಗ್ಗೆ ಭಯ ಬೇಡ': ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಿಎಂ

|
Google Oneindia Kannada News

ದಾವಣಗೆರೆ, ನವೆಂಬರ್ 29: ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರ್ವಜನಿಕರಿಗೆ ಕೊರೊನಾ ಬಗ್ಗೆ ಅಭಯ ನೀಡಿದ್ದಾರೆ. ಜೊತೆಗೆ ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.

ಇಂದು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು," ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಕುರಿತು ಜನತೆ ಭಯಪಡುವ ಅಗತ್ಯತೆ ಇಲ್ಲ. ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು" ಎಂದರು.

ಅಭಯ ನೀಡಿದ ಸಿಎಂ: 'ರೂಪಾಂತರಿ ವೈರಸ್ ಕಂಡುಬಂದಿರುವ ದೇಶಗಳಿಂದ ಬಂದಿರುವವರ ಮೇಲೆ ನಿಗಾ ಇರಿಸಿದ್ದು, ಅವರ ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸಲಾಗುತ್ತಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿಯೂ ಕಟ್ಟುನಿಟ್ಟಿನ ಪರೀಕ್ಷೆ ಮಾಡುತ್ತಿದ್ದು, ನೆಗಟಿವ್ ಇದ್ದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.

ಎಲ್ಲ ಜಿಲ್ಲೆಗಳಲ್ಲಿ ಕೇರಳದಿಂದ ಆಗಮಿಸಿರುವ ವಿದ್ಯಾರ್ಥಿಗಳು ಆಗಮಿಸುವವರಿಗೆ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ನೇ ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಲು ಸೂಚಿಸಲಾಗಿದೆ. ಜನರು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ' ಎಂದರು. ಸರ್ಕಾರ ನಿರಂತರವಾಗಿ ತಜ್ಞರು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಕಾಲಕಾಲಕ್ಕೆ ಅವರು ನೀಡುವ ನಿರ್ದೇಶನದಂತೆ ಕ್ರಮ ವಹಿಸಲಾಗುವುದು ಎಂದರು.

ವಿದೇಶಿಗರ ಮೇಲೆ ನಿಗಾ

ವಿದೇಶಿಗರ ಮೇಲೆ ನಿಗಾ

ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಗೆ ವಿಭಿನ್ನ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಐ.ಸಿ.ಎಂ.ಆರ್‌ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಯಾವ ತಳಿ ಎಂದು ತಿಳಿಯಲಿದೆ ಎಂದರು. ಬೂಸ್ಟರ್ ಡೋಸ್‌ಗೆ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ನಿರ್ದೇಶನ ಬರಬೇಕಿದೆ. ನಮ್ಮ ಕಾಳಜಿ ಆರೋಗ್ಯ ಕಾರ್ಯಕರ್ತರದ್ದು. ಈಗಾಗಲೇ ಅವರು ಎರಡು ಡೋಸ್ ಪಡೆದು 6 ತಿಂಗಳ ಮೇಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನುಗುಣವಾಗಿ ಕ್ರಮ ವಹಿಸಲಾಗುವುದು ಎಂದರು.

ಅವಳಿನಗರದಲ್ಲಿ ಕೊರೊನಾಘಾತ

ಅವಳಿನಗರದಲ್ಲಿ ಕೊರೊನಾಘಾತ

ಅವಳಿ ನಗರದಲ್ಲಿ ಕೊರೊನಾ ಸ್ಪೋಟಗೊಂಡಿದ್ದು ಧಾರವಾಡ ಎಸ್‌ಡಿಎಂ ಕಾಲೇಜಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 306ಕ್ಕೆ ಏರಿಕೆಯಾಗಿದ್ದು ಆತಂಕ ಹೆಚ್ಚಿಸಿದೆ. ಇದರಿಂದಾಗಿ ಆವರಣದಲ್ಲಿರುವ ಎರಡು ಹಾಸ್ಟೆಲ್‌ಗಳನ್ನು ಸೀಲ್ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾಂಪಸ್‌ನಲ್ಲಿ ಚಲನೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು ಸೋಂಕು ಹರಡುವುದನ್ನು ತಡೆಯಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ನಿರ್ಲಕ್ಷ್ಯವೇ ಕಾರಣ

ನಿರ್ಲಕ್ಷ್ಯವೇ ಕಾರಣ

ಈ ಹಿಂದೆ ಎಸ್‌ಡಿಎಂ ಕಾಲೇಜಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಲ್ಲಿ ಕೊರೊನಾ ಹರಡಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ "ಕಾಲೇಜಿನ ಎಲ್ಲಾ 1,788 ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಗಿದೆ. ಕೆಲವು ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ. ಒಂದು ಅಂತರಾಷ್ಟ್ರೀಯ ಶಾಲೆಯು 34 ಪ್ರಕರಣಗಳು ಮತ್ತು ಇನ್ನೊಂದು 12 ಪ್ರಕರಣಗಳನ್ನು ವರದಿ ಮಾಡಿದೆ. ಈ ಪ್ರಕರಣಗಳಲ್ಲಿ ಯಾವುದೂ ತೀವ್ರವಾಗಿಲ್ಲ" ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.

ಕಾಲೇಜಿನ ಕೋವಿಡ್ ಸ್ಫೋಟ ಪರಿಸ್ಥಿತಿ

ಕಾಲೇಜಿನ ಕೋವಿಡ್ ಸ್ಫೋಟ ಪರಿಸ್ಥಿತಿ

ಶನಿವಾರ ಬೆಳಗ್ಗೆ ತನಕ 1500ಕ್ಕೂ ಹೆಚ್ಚು ಕೋವಿಡ್ ಪರೀಕ್ಷೆಗಳು ಪೂರ್ಣಗೊಂಡಿದ್ದು, 1822 ಜನರ ಕೊರೊನಾ ಪರೀಕ್ಷಾ ಫಲಿತಾಂಶ ಬಾಕಿ ಉಳಿದಿತ್ತು. ಪರೀಕ್ಷಾ ವರದಿ ನಿನ್ನೆ ಬೆಳಗ್ಗೆ ಬಂದಿದ್ದು ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಯಾಗಿದೆ. ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಎಸ್‌ಡಿಎಂ ಕಾಲೇಜಿನ ಕೋವಿಡ್ ಸ್ಫೋಟ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಿದ್ದು, ಸೋಂಕಿತ ರೋಗಿಗಳಿಗೆ ಯಾವುದೇ ತೀವ್ರ ಆರೋಗ್ಯ ಸಮಸ್ಯೆಗಳು ಕಂಡುಬಂದರೆ ಅವರನ್ನು ನೋಡಿಕೊಳ್ಳಲು ಎಂಟು ಆಂಬ್ಯುಲೆನ್ಸ್‌ಗಳನ್ನು ಮತ್ತು ಅಗತ್ಯವಿರುವ ಸಿಬ್ಬಂದಿ ಮತ್ತು ವೈದ್ಯರನ್ನು ನಿಯೋಜಿಸಿದ್ದಾರೆ. ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸಾಕಷ್ಟು ಸಂಪನ್ಮೂಲಗಳಿದ್ದು, ಆಸ್ಪತ್ರೆ ಮತ್ತು ಕಾಲೇಜು ಆವರಣದ ಹೊರಗೆ ಹರಡುವುದನ್ನು ತಡೆಯಲು ಜಿಲ್ಲಾಧಿಕಾರಿ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Recommended Video

BCCI ಗೆ ಕ್ಯಾರೇ ಎನ್ನದ ಪಾಂಡ್ಯ ಮುಂದಿನ ಕ್ರಿಕೆಟ್ ಭವಿಷ್ಯ?? | Oneindia Kannada

English summary
'Don't be afraid of covid19 ': no Lockdown proposal in front of government said CM Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X