• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕುಡಿದ ಅಮಲಿನಲ್ಲಿ ಮಗನಿಗೆ ರಾಡ್‌ನಿಂದ ಹೊಡೆದ ತಂದೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 17: ಕುಡಿದ ಅಮಲಿನಲ್ಲಿ ಮಗನಿಗೆ ರಾಡ್‌ನಿಂದ ತಂದೆ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ‌.

ನ್ಯಾಮತಿ ಪಟ್ಟಣದ ಶಿವಾನಂದಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಬಾಲಕ ಶ್ರೇಯಸ್ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶ್ರೀನಿವಾಸ್ ಎಂಬಾತನೇ ಕುಡಿದ ಅಮಲಿನಲ್ಲಿ ಹಲ್ಲೆ ನಡೆಸಿರುವ ತಂದೆಯಾಗಿದ್ದು, ಶ್ರೇಯಸ್ ತಾಯಿ ಇಲ್ಲದ ಕಾರಣ ತಂದೆಯೇ ಎಲ್ಲ ನೋಡಿಕೊಳ್ಳುತ್ತಿದ್ದ. ಮದ್ಯ ಸೇವಿಸಿ ಬಂದಿದ್ದ ಶ್ರೀನಿವಾಸ್, ಮಗನ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಶ್ರೇಯಸ್‌ನ ಕಿರುಚಾಟ ಕೇಳಿ ಸ್ಥಳೀಯರು ಆಗಮಿಸಿದ್ದು, ಶ್ರೇಯಸ್ ನನ್ನ ರಕ್ಷಣೆ ಮಾಡಿದ್ದಾರೆ.

   ಅಫ್ಘಾನಿಸ್ತಾನದಲ್ಲಿ ಈಗ ತಾಲಿಬಾನ್ ಬಾವುಟಗಳ ಎಲ್ಲೆಡೆ ರಾರಾಜಿಸುತ್ತಿದೆ | Oneindia Kannada

   ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

   English summary
   Drunken father assualt on son with iron rod in Nyamathi town of Davanagere district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X