ದಾವಣಗೆರೆ: ಎಲೆಬೇತೂರಿನಲ್ಲಿ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ!

ದಾವಣಗೆರೆ, ಜನವರಿ 25: ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಗುರುಸಿದ್ಧಪ್ಪ ಹಾಗೂ ಸರೋಜಮ್ಮ ಕೊಲೆಗೀಡಾದ ವೃದ್ಧ ದಂಪತಿ ಎಂದು ಗುರುತಿಸಲಾಗಿದೆ. ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ತಡರಾತ್ರಿ ಹತ್ಯೆ ಮಾಡಿ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Davanagere: Elderly couple found murdered at home in Elebethur

ಗುರುಸಿದ್ದಪ್ಪ, ಸರೋಜಮ್ಮ ದಂಪತಿ ಎಲೆಬೇತೂರು ಗ್ರಾಮದಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮೂವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು.‌ ಮನೆಯಲ್ಲಿ ಗುರುಸಿದ್ಧಪ್ಪ, ಸರೋಜಮ್ಮ ಇಬ್ಬರೇ ವಾಸ ಆಗಿದ್ದರು. ತಡರಾತ್ರಿ ಮನೆಗೆ ನುಗ್ಗಿರುವ ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

Davanagere: Elderly couple found murdered at home in Elebethur

ಬೆಳಗ್ಗೆ ಮನೆ ಬಾಗಿಲು ತೆರೆದಿರುವುದನ್ನು ನೋಡಿದ ಮಹಿಳೆಯು ಮನೆಯೊಳಗೆ ಹೋದಾಗ ಕೊಲೆ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಹಿಳೆ ಮಾಹಿತಿ ನೀಡಿದ್ದಾರೆ. ಹಣಕ್ಕಾಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿನಡೆದಿದೆ.

Recommended Video

      Team India ಕಳೆದ ಸರಣಿಯ ಬೆಸ್ಟ್ ಕ್ಷಣಗಳು | Oneindia Kannada

      ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಎಸ್ಪಿ ಸಿ.ಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾತ್ರಿ ಮನೆಗೆ ನುಗ್ಗಿದ ಹಂತಕರು ಕೊಲೆಗೈದು ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+