ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರ ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸುತ್ತಿದೆ: ಈಶ್ವರ ಖಂಡ್ರೆ ವ್ಯಂಗ್ಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ 28: ಲಾಕ್ ಡೌನ್ ಕಾರಣ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಅಂಗೈಯಲ್ಲಿ ಅರಮನೆ, ಮಾಯಾ ಬಜಾರ್ ತೋರಿಸಿದ್ದಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದ್ದಾರೆ.

ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಜಗತ್ತು ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿದೆ. ನಮ್ಮ ದೇಶದಲ್ಲೂ ಎರಡು ತಿಂಗಳಿನಿಂದ ಲಾಕ್ ಡೌನ್ ಇದೆ. ಕೊರೊನಾ ಬಗ್ಗೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಜನರು, ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದಾರೆ. ವಲಸೆ ಕಾರ್ಮಿಕರಿಗೆ ಊಟ, ಆಶ್ರಯ, ಸಾರಿಗೆ ವ್ಯವಸ್ಥೆ, ಭದ್ರತೆ ಕೊಟ್ಟಿಲ್ಲ. ಆ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ" ಎಂದು ಕಿಡಿಕಾರಿದರು.

ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ: ಖಂಡ್ರೆಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ: ಖಂಡ್ರೆ

ಕೇಂದ್ರ ಸರ್ಕಾರ ಕರ್ನಾಟಕದ ವಿಚಾರವಾಗಿ ಮಲತಾಯಿ ಧೋರಣೆ‌ ಮಾಡುತ್ತಿದೆ. ಬರ, ಪ್ರವಾಹ, ಜಿಎಸ್ ‍ಟಿ, 15ನೇ ಹಣಕಾಸು ಯೋಜನೆಯಲ್ಲಿ ಸಮರ್ಪಕವಾದ ಅನುದಾನ ವಿಚಾರದಲ್ಲೂ ಇದೇ ರೀತಿ ಆಯ್ತು. ಈಗಲೂ ಹಾಗೆಯೇ ಆಗಿದೆ. ಕರ್ನಾಟಕಕ್ಕೆ ಪ್ರತಿ ಬಾರಿಯೂ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಈ ಬಗ್ಗೆ ರಾಜ್ಯದ 25 ಸಂಸದರು ಕೂಡ ಕೇಂದ್ರದ ಮುಂದೆ ತುಟಿ ಬಿಚ್ಚುತ್ತಿಲ್ಲ ಎಂದರು.

Eshwar Khandre Criticized Central Governments 20 Lakhs Crore Package

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಪಕ್ಷವು ಸಾಮಾಜಿಕ ಜಾಲತಾಣದಲ್ಲಿ ನಾಳೆಯಿಂದ ಅಭಿಯಾನ ಮಾಡಲಿದ್ದು, ನೇರವಾಗಿ ಬಡವರ ಖಾತೆಗೆ 10 ಸಾವಿರ ಹಣ ಜಮೆ ಮಾಡಬೇಕು ಎಂದು ಆಗ್ರಹಿಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ವಲಸೆ ಕಾರ್ಮಿಕರು, ರೈತರು, ಬಡವರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಮಾನವೀಯವಾಗಿ ವರ್ತಿಸುತ್ತಿದ್ದು, ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು.

ಕೆಪಿಸಿಸಿ ಅಧ್ಯಮಾರಂಭ ನಡೆಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದ್ದು, ಕೊವಿಡ್ ಹಿನ್ನೆಲೆ ಪದಗ್ರಹಣ ಸಮಾರಂಭ ಮಾಡಿಕೊಂಡಿರಲಿಲ್ಲ. ಜೂನ್ 7 ರಂದು ಪದಗ್ರಹಣ ಸಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಸಂವಿಧಾನ ಪೀಠದ ಜೊತೆ ಪ್ರತಿಜ್ಞೆ ಮಾಡಲಾಗುವುದು ಎಂದರು.

English summary
"Central government's 20 Lakhs crore package wont help poor people" criticized Eshwar khandre in davanagere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X