ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ, ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ನಿಷೇಧ'

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಆಗಸ್ಟ್ 14: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಆಗಸ್ಟ್ 21 ಹಾಗೂ 22 ರಂದು ಗೌರಿ ಗಣೇಶ ಹಬ್ಬಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೊಹರಂ ಹಬ್ಬದಲ್ಲಿ ತಾಬೂತುಗಳ ಪ್ರತಿಷ್ಠಾಪನೆ ಮಾಡುವುದನ್ನು ನಿಷೇಧಿಸಿ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

ಗಣೇಶ ಮೂರ್ತಿವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ವೇಳೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ನೃತ್ಯ ಮಾಡುತ್ತಾ ಬಣ್ಣ ಎರಚುವುದರಿಂದ ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಅಸಾಧ್ಯ. ಅಲ್ಲದೇ ಕೇಂದ್ರ ಸರ್ಕಾರದ ಲಾಕ್ ಡೌನ್ ತೆರವು-3 ಮಾರ್ಗಸೂಚಿ ಆಗಸ್ಟ್ 31 ರವರೆಗೆ ಇದ್ದು, ಅದರಲ್ಲಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳಿಗೆ ಅನುಮತಿ ನೀಡಿಲ್ಲ.

"ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ನಿಷಿದ್ಧ''

ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಗಣೇಶ ಹಾಗೂ ಮೊಹರಂ ಹಬ್ಬ ಸಂಬಂಧ ಯಾವುದೇ ಮೆರವಣಿಗೆ ರ‍್ಯಾಲಿ, ಜಾಥಾ ಕಾರ್ಯಕ್ರಮಗಳು ಹಾಗೂ ಡಿ.ಜೆ ಸಿಸ್ಟಂ ಬಳಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

Davanagere: Establishment of Ganesha Statue In Public Places Banned

ಜಿಲ್ಲೆಯಲ್ಲಿ 324 ಕಂಟೈನ್ಮೆಂಟ್ ವಲಯಗಳು ಇದ್ದು, ಬಂದೋಬಸ್ತ್ ಗಾಗಿ ಈಗಾಗಲೇ ಗರಿಷ್ಠ ಸಿಬ್ಬಂದಿಯನ್ನು ಬಳಸಿಕೊಳ್ಳುತ್ತಿದ್ದು, ಹೆಚ್ಚುವರಿಯಾಗಿ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿ ಕರ್ತವ್ಯ ನಿರ್ವಹಿಸಲಾಗುತ್ತಿದೆ. 50 ಪೊಲೀಸರಿಗೆ ಕೋವಿಡ್-19 ದೃಢಪಟ್ಟಿರುವುದರಿಂದ ಭದ್ರತೆಗೆ ಪೊಲೀಸರ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

English summary
Davanagere District Collector, Mahantesh Beelagi, has issued an order banning the installation of Ganesha statues in public places and the installation of Mohoram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X