• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೆಕ್ಕೆಜೋಳ ಮತ್ತು ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹಿಸಿ ರೈತರ ಪ್ರತಿಭಟನೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಅಕ್ಟೋಬರ್ 8: ಮೆಕ್ಕೆಜೋಳ ಮತ್ತು ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಇಂದು ಮಾಯಕೊಂಡದ ನಾಡ ಕಚೇರಿ ಎದುರು ಭಿಕ್ಷಾಟನೆ ಮಾಡುವ ಮೂಲಕ ವಿನೂತನ ಚಳುವಳಿ ನಡೆಸಲಾಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್ ಗೆ 1850 ರೂ. ನಿಗದಿ ಮಾಡಿದ್ದು, ಮಾರುಕಟ್ಟೆಯಲ್ಲಿ 900 ರಿಂದ 1000ಕ್ಕೆ ಮಾರಾಟವಾಗುತ್ತಿದೆ. ಭತ್ತ ಪ್ರತಿ ಕ್ವಿಂಟಾಲ್ ಗೆ 1840 ರೂ. ನಿಗದಿ ಮಾಡಿದ್ದು, ಮಾರುಕಟ್ಟೆಯಲ್ಲಿ 1300 ರಿಂದ 1400ಕ್ಕೆ ಮಾರಾಟವಾಗುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಹತ್ರಾಸ್ ಅತ್ಯಾಚಾರ ಪ್ರಕರಣ: ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ಮೆಕ್ಕೆಜೋಳದಲ್ಲಿ 800 ರೂ. ನಷ್ಟ, ಭತ್ತದಲ್ಲಿ 500 ರಿಂದ 600 ರೂ. ನಷ್ಟವಾಗುತ್ತಿದೆ. ಇದು ಕೇಂದ್ರ ಸರ್ಕಾರಕ್ಕೂ ಅವಮಾನವೆಂದು ಪ್ರತಿಭಟನಾಕಾರ ರೈತರು ದಾವಣಗೆರೆ ಜಿಲ್ಲೆಯ ಮಾಯಕೊಂಡದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಣಬೇರು ಕುಮಾರಸ್ವಾಮಿ, ಕಬ್ಬಳ ಪ್ರಸಾದ್, ಬಲ್ಲೂರು ಪರಶುರಾಮರೆಡ್ಡಿ, ಆವರಗೆರೆ ಇಟಗಿ ಬಸವರಾಜಪ್ಪ, ಲಿಂಗರಾಜ್ ಪಾಮೇನಹಳ್ಳಿ, ಬಸವರಾಜಪ್ಪ ರಾಂಪುರ ಪಾಲ್ಗೊಂಡಿದ್ದರು.

   Political Popcorn with Lavanya : Satish Jarkiholi, ರಾಗಿ ಮುದ್ದೆ ಗು ಸೈ ಜೋಳದ ರೊಟ್ಟಿಗೆ ಜೈ | part 02

   ಇನ್ನು ರೈತರಾದ ಮಾಯಕೊಂಡ ನಿಂಗಪ್ಪ, ಮಾಯಕೊಂಡ ಗೌಡರ ಅಶೋಕ್, ಆಲೂರು ಪರಮೇಶ್ವರಪ್ಪ, ಜಯನಾಯ್ಕ್ ನಾಗರಕಟ್ಟೆ, ಬಲ್ಲೂರ್ ಅಣ್ಣಪ್ಪ, ಬೂದಾಳ್ ಮಹೇಶ, ಕರುಣಾ, ಪ್ರತಾಪ ಸೇರಿದಂತೆ ಮಾಯಕೊಂಡ ಹಾಗೂ ಸುತ್ತಮುತ್ತಲಿನ ಗ್ರಾಮದ ರೈತರು ಭಾಗವಹಿಸಿದ್ದರು.

   English summary
   Karnataka State Farmers' Association staged a protest today at Mayakonda near Davanagere demanding the opening of maize and paddy purchasing center.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X