• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮದ್ಯ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಒಬ್ಬ ಸಾವು

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಜನವರಿ 8: ದಾವಣಗೆರೆ ಸಮೀಪ ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್‌.ಎಸ್ ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ದುಗ್ಗಾವತಿ ಸಕ್ಕರೆ ಕಾರ್ಖಾನೆಯಲ್ಲಿ ಮದ್ಯ ತಯಾರಿಕ ಘಟಕವಾದ ಜಾನ್ ಡಿಸ್ಟಿಲರೀಸ್ ಗೆ ಸೇರಿದ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಶುಕ್ರವಾರ ಬೆಳಿಗ್ಗೆ ಟ್ಯಾಂಕರ್ ವೈಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಕುಂದವಾಡ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಿದ್ದೇಶ್ವರರಿಂದ ಚಾಲನೆ

ಆಲ್ಕೋಹಾಲ್ ತಯಾರಿಕಾ ಘಟಕವಾಗಿದ್ದರಿಂದ ಬೆಂಕಿ ಬೇಗನೇ ಇಡೀ ಘಟಕ್ಕೆ ವ್ಯಾಪಿಸಿತು. ಭಾರೀ ದೊಡ್ಡ ಪ್ರಮಾಣದಲ್ಲಿ ಬೆಂಕಿ ಉರಿಯುತ್ತಿದೆ. ಮದ್ಯ ತುಂಬಿದ 22ಕ್ಕೂ ಹೆಚ್ಚು ಟ್ಯಾಂಕರ್ ಗಳಿಗೆ ಬೆಂಕಿಗೆ ಬಿದ್ದಿದ್ದು, 25ಕ್ಕೂ ಹೆಚ್ಚು ಫೈರ್ ಇಂಜಿನ್ ಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಒಡೆತನ ಕಬ್ಬಿನ ಕಾರ್ಖಾನೆಯಲ್ಲಿ ಜಾನ್ ಡಿಸ್ಟಿಲರ್ಸ್ ಕಂಪನಿ ಗುತ್ತಿಗೆ ಆಧಾರದ ಮೇಲೆ ಮದ್ಯ ತಯಾರಿಕೆ ನಡೆಸುತ್ತಿತ್ತು. ಆದರೆ, ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮದ್ಯ ತುಂಬಿದ ಟ್ಯಾಂಕರ್ ಗಳಿಗೆ ಬೆಂಕಿ ಬಿದ್ದಿದೆ.

ಕಾರ್ಖಾನೆಯಲ್ಲಿ ಐದು ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದು, 38 ವರ್ಷದ ರಘು ಎನ್ನುವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿದ್ದಾನೆ. ಅಲ್ಲದೆ ಒಬ್ಬ ಕಾರ್ಮಿಕ ಬೆಂಕಿಯಲ್ಲೇ ಸಿಕ್ಕಿ ಹಾಕಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಗಂಭೀರವಾಗಿ ಗಾಯಗೊಂಡವರು ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಇನ್ನು ಬೆಂಕಿ ನಂದಿಸುವ ಕಾರ್ಯ ಅಗ್ನಿಶಾಮಕ ಸಿಬ್ಬಂದಿಗಳಿಂದ ನಡೆದಿದ್ದು, ಕಾರ್ಖಾನೆಯ ಸುತ್ತ ದಟ್ಟವಾದ ಹೊಗೆ ಆವರಿಸಿಕೊಂಡಿದೆ.

ಸಾಕಷ್ಟು ಪ್ರಮಾಣದ ಮದ್ಯದ ಬಾಟಲ್‌ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.

ಸ್ಥಳಕ್ಕೆ ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಹಶೀಲ್ದಾರ್ ಎಲ್.ಎಂ.ನಂದೀಶ್ ಭೇಟಿ ನೀಡಿ ಪರಿಶೀಲಿಸಿದರು. ಹಲವಾಗಲು ಠಾಣಾ ಪೊಲೀಸರು ಸ್ಥಳದಲ್ಲಿದ್ದಾರೆ.

English summary
A worker has died after a fire broke out at a liquor manufacturing plant in Duggavati of Harapanahalli taluk near Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X