ದಾವಣಗೆರೆಯಲ್ಲಿ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ
ದಾವಣಗೆರೆ, ಮಾರ್ಚ್ 2: ದಾವಣಗೆರೆ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದೆ. ನಿನ್ನೆ ಮಧ್ಯರಾತ್ರಿ ಸಮಯ ಒಂದು ಗಂಟೆಗೂ ಹೆಚ್ಚು ಕಾಲ ಸಾಧಾರಣೆ ಮಳೆಯಾಗಿದೆ.
ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಮಾಯಕೊಂಡ ಸೇರಿದಂತೆ ಹಲವೆಡೆ ಇಂದು ಮಳೆ ಸುರಿದಿದೆ. ಇದು ವರ್ಷದ ಮೊದಲ ಮಳೆಯಾಗಿದ್ದು, ಜಿಲ್ಲೆಯ ಜನರಲ್ಲಿ ಮಂದಹಾಸ ಮೂಡಿದೆ.

ಕೆಲ ಭಾಗದಲ್ಲಿ ಜಮೀನುಗಳಲ್ಲಿ ಕಟಾವಾಗಿದ್ದ ಬೆಳೆಗಳು ಇದ್ದು, ಮಳೆಯಾಗಿದ್ದರಿಂದ ರೈತರಿಗೆ ಆತಂಕವಾಗಿತ್ತು. ಆದರೆ ಸಾಧಾರಣ ಮಳೆಯಾದ ಸಮಸ್ಯೆಯಾಗಿಲ್ಲ. ಜೊತೆಗೆ ಬಿಸಿಲಿನ ತಾಪದಿಂದ ಬೇಸತ್ತ ಜನರಿಗೆ ತಂಪೆರೆದಂತಾಗಿದೆ. ಮಳೆಯಿಂದ ವಾತಾವರಣ ಕೂಡ ತಂಪಾಗಿದ್ದು, ಖುಷಿ ತಂದಿದೆ.












Click it and Unblock the Notifications