• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಠಾಣೆಯ ರೆಸ್ಟ್ ರೂಂನಲ್ಲೇ ಜೂಜಾಟ, ಐವರು ಕಾನ್ ಸ್ಟೆಬಲ್ ಗಳು ವಶಕ್ಕೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಜೂನ್ 10: ಕೊರೊನಾ ಸಂಕಷ್ಟದಲ್ಲಿ ಹಗಲು ರಾತ್ರಿ ಎನ್ನದೇ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಶ್ರಮಿಸುತ್ತಿದ್ದಾರೆ. ಆದರೆ ದಾವಣಗೆರೆಯ ಗ್ರಾಮಾಂತರ ಠಾಣೆಯಲ್ಲಿ, ಈ ಸಮಯದಲ್ಲಿ ಕೆಲ ಸಿಬ್ಬಂದಿ ರೆಸ್ಟ್ ರೂಂನಲ್ಲಿ ಜೂಜಾಟವಾಡಿ ಸಿಕ್ಕಿ ಬಿದ್ದಿದ್ದಾರೆ.

ಕಳೆದ ರಾತ್ರಿ ದಾವಣಗೆರೆಯ ಗ್ರಾಮಾಂತರ ಪೊಲೀಸ್ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಜೂಜಾಟವಾಡುತ್ತಿದ್ದ 5 ಕಾನ್ ಸ್ಟೆಬಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇಸ್ಪೀಟ್ ಆಡುವಾಗ ರೆಡ್ ಹ್ಯಾಂಡ್ ಆಗಿ ಐಜಿ ಸ್ಕ್ವಾಡ್ ಗೆ ಸಿಕ್ಕಿ ಬಿದ್ದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 5 ಜನ ಪೊಲೀಸರಿಂದ 29 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೀದರ್: ಜೂಜುಅಡ್ಡೆ ಮೇಲೆ ದಾಳಿ ಮಾಡಿದ 17 ಪೊಲೀಸರಿಗೆ ಕ್ವಾರೆಂಟೈನ್!

ದಾವಣಗೆರೆ ಗ್ರಾಮಾಂತರ ಠಾಣೆಯ ರೆಸ್ಟ್ ರೂಮಿನಲ್ಲಿ ಇಸ್ಪೀಟ್ ಆಡುತ್ತಿದ್ದಾರೆ ಎಂದು ಪೂರ್ವ ವಲಯದ ಐಜಿ ರವಿಯವರಿಗೆ ಮಾಹಿತಿ ಹೋಗಿತ್ತು. ಖಚಿತ ಮಾಹಿತಿ ಮೇರೆಗೆ ಐಜಿ ನಿರ್ದೇಶನದಂತೆ ರೇಡ್ ಮಾಡಿದ್ದು, ಕಾನ್ ಸ್ಟೆಬಲ್ ಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್, ಬಾಲರಾಜ್ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಶಿಕ್ಷಣ ಇಲಾಖೆಯ ಸಿಬ್ಬಂದಿಯನ್ನು ಜಿಲ್ಲಾಡಳಿತ ಕೊರೊನಾ ಕರ್ತವ್ಯಕ್ಕೆ ನೇಮಕ ಮಾಡಿತ್ತು. ಆದರೆ ಕರ್ತವ್ಯವನ್ನು ಮರೆತು ಹಾಗು ಲಾಕ್‌ಡೌನ್ ಸಮಯದಲ್ಲಿ ಪಿಬಿ ರಸ್ತೆಯಲ್ಲಿನ ಬಿಲಾಲ್ ಕಾಂಪೌಂಡ್ ಆವರಣದಲ್ಲಿ ಈ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು. ಇದೇ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿ 7 ಜನ ಶಿಕ್ಷಣ ಇಲಾಖೆ ಸಿಬ್ಬಂದಿಯನ್ನು ಬಂಧಿಸಿದ್ದರು. ಅಲ್ಲದೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

English summary
Five constables were taken to custody last night while gambling in the restrooms of the Davanagere Rural Police Station
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X