• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ ಬಳಿ ಮಾಜಿ ಸಚಿವ ಯುಟಿ ಖಾದರ್ ಕಾರು ಅಪಘಾತ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಏಪ್ರಿಲ್ 14: ಮಾಜಿ ಸಚಿವ ಹಾಗೂ ಶಾಸಕ ಯು.ಟಿ ಖಾದರ್ ಅವರ ಕಾರು ಅಪಘಾತವಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ನಡೆದಿದೆ.

ದಾವಣಗೆರೆ ತಾಲ್ಲೂಕಿನ ಆನಗೋಡು ಗ್ರಾಮದ ಬಳಿ ಘಟನೆ ಸಂಭವಿಸಿದ್ದು, ಬೆಂಗಳೂರಿನಿಂದ ಬರುತ್ತಿದ್ದ ಮಾಜಿ ಸಚಿವರ ಕಾರು, ಮುಂದೆ ಹೋಗುತ್ತಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಸಚಿವರ ಕಾರಿನ ಮುಂಭಾಗದ ಬಾನೇಟ್ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಎಸ್ಪಿ ಹನುಮಂತರಾಯ ಭೇಟಿ ನೀಡಿ, ಮಾಜಿ ಸಚಿವರ ಆರೋಗ್ಯ ವಿಚಾರಣೆ ನಡೆಸಿದರು.

   ಕೊರೊನಾ ವಿಚಾರದಲ್ಲಿ ಎಚ್ಚರಿಕೆಯನ್ನ ಕಡೆಗಣಿಸಿ ಈಗ ಸಭೆ ಮಾಡಿ ಏನು ಪ್ರಯೋಜನ? ಹೆಚ್‌ ಡಿಕೆ ಟ್ವೀಟ್ | Oneindia Kannada

   ಇನ್ನು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಾಜಿ‌ ಸಚಿವ ಯು.ಟಿ ಖಾದರ್ ರವರಿಗೆ ಯಾವುದೇ ಗಾಯವಾಗಿಲ್ಲ. ಅಪಘಾತ ಸಂಭವಿಸಿದ್ದರಿಂದ ತಮ್ಮ ಕಾರು ಬಿಟ್ಟು ಬೇರೊಂದು ಕಾರಿನ ಮೂಲಕ ಖಾದರ್ ತೆರಳಿದರು. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

   English summary
   Former minister and MLA UT Khader car got accident near Davanagere on Wednesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X