• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟೈರ್ ತುಂಬಿದ್ದ ಟ್ರಕ್, ಗ್ಯಾಸ್ ಟ್ಯಾಂಕರ್ ಡಿಕ್ಕಿ; ನಾಲ್ವರು ಸಜೀವ ದಹನ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಡಿಸೆಂಬರ್ 26: ಕಂಟೇನರ್ ಟ್ರಕ್ ಹಾಗೂ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದು ಇಬ್ಬರು ಚಾಲಕ ಹಾಗೂ ಕ್ಲೀನರ್ ಒಳಗೊಂಡಂತೆ ನಾಲ್ವರು ಸಜೀವ ದಹನವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬುಧವಾರ ಘಟನೆ ನಡೆದಿದೆ. ಹರಿಯಾಣಕ್ಕೆ ಸೇರಿದ ಗ್ಯಾಸ್ ಟ್ಯಾಂಕರ್, ಟೈರ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಕಂಟೇನರ್ ‌ಟ್ರಕ್ ಗೆ ಎದುರಿನಿಂದ ಡಿಕ್ಕಿ ಹೊಡೆದು ಬೆಂಕಿ‌ ಹೊತ್ತಿಕೊಂಡಿದೆ.

ದಕ್ಷಿಣ ಭಾರತದಲ್ಲಿಯೇ ಕರ್ನಾಟಕದ ರಸ್ತೆ ಅಪಾಯಕಾರಿ!

ಗ್ಯಾಸ್ ಟ್ಯಾಂಕರ್ ನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಟೈರ್ ಗಳು ಸುಟ್ಟು ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕಂಟೇನರ್ ಟ್ರಕ್ ನಲ್ಲಿದ್ದ ಇನ್ನಿಬ್ಬರು ಕೂಡ ಸಜೀವ ದಹನವಾಗಿರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಜಗಳೂರು ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

English summary
Four persons, including two drivers and a cleaner, were killed when a container truck and a gas tanker collided in Davanagere,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X