ದಾವಣಗೆರೆ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ದಾವಣಗೆರೆ, ಆಗಸ್ಟ್ 18 : ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದ್ದು ಇಂದು (ಶುಕ್ರವಾರ) ಬೆಳಕಿಗೆ ಬಂದಿದೆ.
ಪಾಲಾಕ್ಷಿ(34) ಪತ್ನಿ ಶಶಿಕಲಾ(28) ಹಾಗೂ ಇಬ್ಬರು ಮಕ್ಕಳು ಮೃತ ದುರ್ದೈವಿಗಳು. ಶುಕ್ರವಾ ಬೆಳಿಗ್ಗೆ ಸಂಬಂಧಿಕರು ಮನೆಯ ಬಾಗಿಲು ತೆರೆದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಘಟನಾ ಸ್ಥಳಕ್ಕೆ ಬಸವಪಟ್ಟಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.












Click it and Unblock the Notifications