ಚನ್ನಗಿರಿ: ಕುಸಿಯುವ ಹಂತದಲ್ಲಿರುವ ಸರ್ಕಾರಿ ವಸತಿ ಶಾಲೆಯ ಮೆಲ್ಚಾವಣಿ, ವಿದ್ಯಾರ್ಥಿಗಳಿಗೆ ಆತಂಕ
ದಾವಣಗೆರೆ, ಜುಲೈ, 17: ಚನ್ನಗಿರಿ ತಾಲೂಕಿನ ಈ ಗ್ರಾಮದ ಸರ್ಕಾರಿ ವಸತಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಇದೆ. ಆದರೆ, ಇಲ್ಲಿ ಜಡ್ಡುಗಟ್ಟಿದ ವ್ಯವಸ್ಥೆಯಿಂದ ಸರ್ಕಾರಿ ಶಿಕ್ಷಣ ವ್ಯವಸ್ಥೆ ಹಳ್ಳ ಹಿಡಿಯುತ್ತಿದೆ. ಶಾಲೆಯ ಮೇಲ್ಛಾವಣಿ ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಬೇರೆ ದಾರಿಯಿಲ್ಲದೆ ಪ್ರತಿನಿತ್ಯವೂ ಇಲ್ಲಿಯೇ ಕುಳಿತು ಆತಂಕದಲ್ಲಿಯೇ ಪಾಠ ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಶಿಕ್ಷಕರು ನೀಡುವ ವಿದ್ಯಾಭ್ಯಾಸವೂ ಇನ್ನೂ ಚೆನ್ನಾಗಿದೆ. ಆದರೆ ಶಾಲೆಯಲ್ಲಿನ ಅವ್ಯವಸ್ಥೆ ನೋಡಿದರೆ ಶಿಕ್ಷಣ ಇಲಾಖೆ ಬೇಜವಾಬ್ದಾರಿತನ ಎಷ್ಟರಮಟ್ಟಿಗೆ ಇದೆ ಎಂದು ಗೊತ್ತಾಗುತ್ತಾದೆ. ಚನ್ನಗಿರಿ ತಾಲೂಕಿನ ಅಸ್ತಾಪನಹಳ್ಳಿ ಹಾಗೂ ಗೋಪನಾಳ್ ಗ್ರಾಮದಲ್ಲಿರುವ ಸರ್ಕಾರಿ ವಾಲ್ಮಿಕಿ ಆಶ್ರಮ ಶಾಲೆಯ ದುಸ್ಥಿತಿ ಇದು. ಇಲ್ಲಿನ ವಸತಿ ಶಾಲಾ ಕಟ್ಟಡಗಳ ಸ್ಥಿತಿ ದೇವರೇ ಬಲ್ಲ ಎಂಬಾಂತಾಗಿದೆ. ಮತ್ತೊಂದೆಡೆ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳ ಉನ್ನತೀಕರಣ, ಅಭಿವೃದ್ಧಿ, ಉಳಿವಿಗೆ ಕಂಕಣಬದ್ಧವಾಗಿದೆ ಎಂಬ ಭರವಸೆ ಭರವಸೆಯಾಗಿಯೇ ಉಳಿದಿದೆ.

ಕುಸಿಯುವ ಹಂತದಲ್ಲಿ ಮೇಲ್ಛಾವಣಿ
ಇನ್ನು ಇದೀಗ ಮಳೆಗಾಲ ಆರಂಭವಾಗಿದೆ. ಚನ್ನಗಿರಿ ತಾಲೂಕಿನಲ್ಲಿಯೂ ಈಗಾಗಲೇ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಪರಿಣಾಮ ಅಸ್ತಾಪನಹಳ್ಳಿ ಹಾಗೂ ಗೋಪನಾಳ್‌ನಲ್ಲಿನ ವಸತಿ ಶಾಲೆ ಮೆಲ್ಛಾವಣಿ ಕುಸಿಯುವ ಹಂತದಲ್ಲಿದೆ. ಇದನ್ನು ಗಮನಿಸಿದರೆ ಮಕ್ಕಳು ಇಲ್ಲಿ ಕುಳಿತು ಹೇಗೆ ಪಾಠ ಕಲಿಯುತ್ತಾರೆ ಎಂಬ ಅನುಮಾನ ಎಲ್ಲರಿಗೂ ಶುರುವಾಗಿದೆ. ಹೀಗೆ ಆತಂಕ, ಭಯದಲ್ಲಿಯೇ ಓದುವ ದುರ್ಗತಿ ತಂದೊಡ್ಡಿದೆ ಆಡಳಿತ ವ್ಯವಸ್ಥೆ.
ಯಾವುದೇ ಸಂದರ್ಭದಲ್ಲಿ ಮೇಲ್ಚಾವಣಿ ಕುಸಿದು ಬೀಳುವ ಆತಂಕದಲ್ಲೇ ಮಕ್ಕಳು ಪಾಠ ಕೇಳುತ್ತಿದ್ದಾರೆ. ಕಟ್ಟಡ 25 ವರ್ಷಕ್ಕಿಂತ ಹಳೆಯದಾಗಿದೆ. ಆದರೆ ಇಲ್ಲಿ ಶಿಕ್ಷಕರು ಉಳಿದುಕೊಳ್ಳಲು ಯಾವುದೇ ವಸತಿ ಕಟ್ಟಡ ಇಲ್ಲದಂತಾಗಿದೆ. ಮತ್ತೊಂದೆಡೆ ಮಕ್ಕಳು ಕೂಡ ಮೇಲ್ಛಾವಣಿ ಕುಸಿಯುವ ಆತಂಕದಲ್ಲಿದ್ದಾರೆ.
ಕರೆಂಟ್ ಶಾಕ್ ಭೀತಿಯಲ್ಲಿ ಪಾಠ ಕೇಳುತ್ತಿರುವ ಮಕ್ಕಳು
ಶಾಲೆಯು ರಸ್ತೆ ಬದಿ ಇರುವುದರಿಂದ ಮಕ್ಕಳು ಓಡಾಡಲು ಭಯಡುವಂತಹ ಸನ್ನಿವೇಶ ನಿರ್ಮಾಣವಾಗಿದೆ. ಶಾಲಾ ಆವರಣದಲ್ಲಿ ಎಲ್ಲೆಂದರಲ್ಲೇ ವಿದ್ಯುತ್ ಸಂಪರ್ಕ ಇದ್ದು, ಇದರ ನಡುವೆಯೇ ಮಕ್ಕಳು ಆತಂಕದಲ್ಲಿ ಪಾಠ ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಇಲ್ಲಿನ ಸಿಸಿಟಿವಿ ಕ್ಯಾಮೆರಾಗಳಂತೂ ಇದ್ದು ಇಲ್ಲದಂತಾಗಿವೆ. ಯಾಕೆಂದರೆ ಇವು ಕೆಲಸ ನಿರ್ವಹಿಸದ ಸ್ಥಿತಿಯಲ್ಲಿವೆ.
ಕಂಪ್ಯೂಟರ್ ಇದೆ, ಆದ್ರೆ ಶಿಕ್ಷಕರಿಲ್ಲ
ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಸಲುವಾಗಿ ಸುಮಾರು 15ರಿಂದ 20 ಕಂಪ್ಯೂಟರ್‌ಗಳು ಇಲ್ಲಿವೆ. ಆದರೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಶಿಕ್ಷಕರೇ ಇಲ್ಲ. ಪಠ್ಯೇತರ ಚಟುವಟಿಕೆಗಳು ಎಷ್ಟು ಮುಖ್ಯವೋ ಅಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಓದಿನ ಒತ್ತಡದ ನಡುವೆ ಮನಸ್ಸು ಆಹ್ಲಾದಕರವಾಗುತ್ತದೆ. ಒತ್ತಡ ನಿವಾರಣೆ ಆಗುತ್ತದೆ. ಜೊತೆಗೆ ದೈಹಿಕವಾಗಿ ಸದೃಢವಾಗುತ್ತಾರೆ. ಇಲ್ಲಿ ದೈಹಿಕ ಶಿಕ್ಷಕರು ಇಲ್ಲದ ಕಾರಣ ಕ್ರೀಡೆಗಳನ್ನು ನಡೆಸುವುದು ಕಷ್ಟವಾಗಿದೆ.
ಕಂಪ್ಯೂಟರ್‌ಗಳು, ಪ್ರೊಜೆಕ್ಟರ್‌ಗಳು ಇದ್ದರೂ ಇಂಟರ್‌ನೆಟ್ ವ್ಯವಸ್ಥೆ ಇಲ್ಲ. ಇದರಿಂದ ಇದ್ದು ಇಲ್ಲದ ಪರಿಸ್ಥಿತಿ ಇದೆ. ಪೋಷಕರು ಮಕ್ಕಳನ್ನು ಸಂಪರ್ಕಿಸಲು ದೂರವಾಣಿಯ ಕೊರತೆ ಇದೆ. ಮಕ್ಕಳು ತಮ್ಮ ಕುಟುಂಬದವರ ಜೊತೆ ಮಾತನಾಡಲು ಕಷ್ಟ ಅನುಭವಿಸುವಂತಾಗಿದೆ. ಆದ್ದರಿಂದ ತಕ್ಷಣ ಶಾಲೆಗೆ ದೂರವಾಣಿ ಸಂಪರ್ಕ ಒದಗಿಸುವ ಕೆಲಸ ಮಾಡಬೇಕಿದೆ.
ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಎಷ್ಟು?
ಸದ್ಯ ಅಸ್ತಾಪನಹಳ್ಳಿಯ ವಸತಿ ಶಾಲೆಗಳಲ್ಲಿ 1ನೇ ತರಗತಿಯಿಂದ 5 ತರಗತಿವರೆಗೆ 125 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಒಬ್ಬರು ಮುಖ್ಯಶಿಕ್ಷಕರು, ನಾಲ್ವರು ಸಹ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಗೋಪನಾಳ್ ವಸತಿ ಶಾಲೆಯಲ್ಲಿ 75 ವಿದ್ಯಾರ್ಥಿಗಳು ಓದುತ್ತಿದ್ದು, ಓರ್ವ ಮುಖ್ಯ ಶಿಕ್ಷಕರು, ಮೂವರು ಸಹ ಶಿಕ್ಷಕರಿದ್ದಾರೆ. 75 ವಿದ್ಯಾರ್ಥಿಗಳನ್ನು 3 ಕೊಠಡಿಗಳಲ್ಲಿ ಒಗ್ಗೂಡಿಸಿ ಪಾಠ ಮಾಡುವಂತಹ ದುರ್ಗತಿ ಎದುರಾಗಿದೆ.
ಈ ವಸತಿ ಶಾಲೆಗಳಲ್ಲಿ 200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೆಚ್ಚಿನ ಮಕ್ಕಳು ಪ್ರವೇಶಾತಿಗಾಗಿ ಸಮಾರು 50ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗದಂತಾಗಿದೆ.
ಸ್ಥಳಕ್ಕೆ ಬಾರದ ಅಧಿಕಾರಿಗಳು
ಶಾಲೆಯ ಸುತ್ತಲೂ ಆಟ ಆಡಲು ವ್ಯವಸ್ಥಿತವಾದ ಜಾಗ ಇಲ್ಲ. ಎಲ್ಲಾ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾತ್ರ ಇಲ್ಲಿಗೆ ಭೇಟಿ ಕೊಡದೇ ಬೇಜವಬ್ದಾರಿತನ ತೋರಿಸಿದ್ದಾರೆ. ಇಲ್ಲಿಯ ಸಹ ಶಿಕ್ಷಕರಿಗೆ ವೇತನ ಪ್ರತಿ ತಿಂಗಳು ಸರಿಯಾದ ಸಮಯದಲ್ಲಿ ಸಿಗುತ್ತಿಲ್ಲ. ಸದ್ಯ ಈಗಲಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಸರ್ಕಾರಿ ಶಾಲೆಗಳ ಉಳಿವಿಗೆ ಮುಂದಾಗಬೇಕಿದೆ.
ವಸತಿ ಶಾಲೆಗಳಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ಅವರ ಗಮನಕ್ಕೆ ತಂದಿದ್ದೇವೆ. ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದಾರೆ. ಮಳೆಗಾಲ ಆರಂಭವಾಗಿದ್ದು, ಕೂಡಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ಅನಾಹುತವಾದಾಗ ಬರುವ ಬದಲು ಈಗಲೇ ಇಲ್ಲಿನ ಅನಾಹುತಕ್ಕೆ ಎಡೆಮಾಡಿಕೊಡುವಂತಹ ಸಮಸ್ಯೆಗಳನ್ನು ಪರಿಹರಿಸಬೇಕು.
ಈ ಮೂಲಕ ಮಕ್ಕಳಿಗೆ ಕಲಿಯಲು ಉತ್ತಮ ವಾತಾವರಣ ಕಲ್ಪಿಸಿಕೊಡಬೇಕು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ವಸತಿ ಶಾಲಾ ಕಟ್ಟಡಗಳ ಬಗ್ಗೆ ಕ್ರಮವಹಿಸುವ ಕೆಲಸ ಮಾಡಬೇಕಿದೆ ಎಂಬುದು ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಪುನೀತ್ ಕುಮಾರ್ ಆಗ್ರಹಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications