Get Updates
Get notified of breaking news, exclusive insights, and must-see stories!

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಕಬಳಿಕೆ: ಬಿಜೆಪಿ ವಿರುದ್ಧ ಪಾಲಿಕೆ ಕಾಂಗ್ರೆಸ್‌ ಸದಸ್ಯರ ಆರೋಪ

ದಾವಣಗೆರೆ, ಆಗಸ್ಟ್‌, 03: ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತಾವಧಿಯ ಮೂರು ವರ್ಷಗಳಲ್ಲಿ ನಡೆದಿರುವ ಒಂದೊಂದೇ ಅಕ್ರಮಗಳು ಈಗ ಬೆಳಕಿಗೆ ಬರುತ್ತಿವೆ. ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಪಾಲಿಕೆ ವ್ಯಾಪ್ತಿಯ ಜಾಗ, ರಾಜಕಾಲುವೆ, ಉದ್ಯಾನವನಗಳ ಜಾಗ ಕಬಳಿಕೆಯಾಗಿದೆ. ಅಧಿಕಾರಿಗಳನ್ನು ಬಳಸಿಕೊಂಡು ಈ ಹಗರಣಗಳು ನಡೆಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ಸದಸ್ಯರಾದ ಎ.ನಾಗರಾಜ್ ಹಾಗೂ ಗಡಿಗುಡಾಳ್ ಮಂಜುನಾಥ್ ಸೇರಿದಂತೆ ಪಾಲಿಕೆ ಸದಸ್ಯರು, ಮಹಾನಗರ ಪಾಲಿಕೆಯ ಎಸ್. ಎಸ್. ಬಡಾವಣೆ 23ನೇ ವಾರ್ಡ್‌ಗೆ ಸೇರಿದ ಬುಸ್ನೂರು ಶಾಲೆ ಹಿಂಭಾಗದಲ್ಲಿ ಸಾರ್ವಜನಿಕ ಬಳಕೆಗೆ ಇರುವಂತಹ ಸರ್ಕಾರಿ ಜಾಗವನ್ನು ಕಬಳಿಸಲಾಗಿದೆ. ಅಲ್ಲದೆ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಮಾರಾಟ ಮಾಡಿರುವುದು ಗೊತ್ತಾಗಿದೆ ಎಂದು ತಿಳಿಸಿದರು.

Government land acquired by creating fake documents: Congress Allegation against BJP in Davanagere

ನಗರದ ಲಕ್ಷ್ಮೀ ಫ್ಲೋರ್ ಮಿಲ್ ಬಳಿ ಇರುವ ಪಾಲಿಕೆಯ ವಲಯ -2ಕ್ಕೆ ಸಂಬಂಧಿಸಿದಂತೆ ಗ್ರಾಮಪಂಚಾಯಿತಿ ರಿ.ಸರ್ವೆ ನಂ. 78/2 ಜಾಗಕ್ಕೆ ಡೋರ್ ನಂಬರ್ ಕೊಟ್ಟು 3937/11, 3937/12, 3937/13, 3937/14 ರಲ್ಲಿ ತಲಾ 30*40 ಅಳತೆಯ ಸೈಟ್‌ಗಳನ್ನಾಗಿ ವಿಂಗಡಿಸಿ ನಾಲ್ಕು ಮಂದಿಗೆ ನೋಂದಣಿ ಮಾಡಿಕೊಳ್ಳಲು ಪಾಲಿಕೆಯಿಂದಲೇ ಖಾತೆ ಮಾಡಿಕೊಡಲಾಗಿದೆ. ಇದಕ್ಕಿಂತ ಬಿಜೆಪಿಯವರ ಅಕ್ರಮಕ್ಕೆ ಸಾಕ್ಷಿ ಬೇಕಾ? ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಖಾಲಿ ನಿವೇಶನ ಮೀಸಲಿಟ್ಟಿದ್ದು ಸಾರ್ವಜನಿಕರ ಬಳಕೆಗಾಗಿ. ಆಸ್ಪತ್ರೆ, ಪಾರ್ಕ್ ಅಥವಾ ಶಾಲೆ ಸೇರಿದಂತೆ ಜನರಿಗಾಗಿ ಎಸ್‌ಎಸ್ ಬಡಾವಣೆಯ ಈ ಜಾಗ ಕಾಯ್ದಿರಿಸಲಾಗಿತ್ತು. ಆದರೆ ಮಧ್ಯವರ್ತಿಗಳು ಹಾಗೂ ಪಾಲಿಕೆಯ ಸಿಬ್ಬಂದಿ ಸೇರಿ ಎಂಎಆರ್ -19, ಕೆಎಂಎಫ್-24 ಆಸ್ತಿ ವಿವರದ ದಾಖಲೆ ಪುಸ್ತಕಗಳಲ್ಲಿ ತಿದ್ದುಪಡಿ ಮಾಡಿ ಕ್ರಯ ಮಾಡಲು ಹಾಗೂ ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದು ಯಾಕೆ?. ಈಗಾಗಲೇ ಈ ನಿವೇಶನಗಳಿಗೆ ಡೋರ್ ನಂಬರ್ ಕೊಟ್ಟು ಖಾತೆ ಕೂರಿಸಲಾಗಿದೆ. ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿಯೂ ರಿಜಿಸ್ಟರ್ ಈಗಾಗಲೇ ಆಗಿದೆ ಎಂದು ಮಾಹಿತಿ ನೀಡಿದರು.

ಮೇಲಾಧಿಕಾರಿಗಳ ಅನುಮತಿ ಇಲ್ಲದೇ, ಮೂಲ ದಾಖಲಾತಿ ಪರಿಶೀಲಿಸದೇ, ಪಾಲಿಕೆ ಉದ್ಯಾನವನ ಜಾಗವನ್ನು ಅಕ್ರಮವಾಗಿ ನಮೂನೆ -3ರಲ್ಲಿ ಸೇರಿಸಿ ಡೋರ್ ನಂಬರ್ ಕೊಡಲಾಗಿದೆ. ತಪ್ಪು ಎಸಗಿದ ಕಾರಣಕ್ಕೆ ಕಳೆದ ಜುಲೈ 14ರಂದು ಪಾಲಿಕೆಯ ಕಂದಾಯ ಇಲಾಖೆಯ ಕರ ವಸೂಲಿಗಾರರಾದ ಸಿ. ಸುನೀತಾ ಅವರನ್ನು ಅಮಾನತುಗೊಳಿಸಲಾಗಿದೆ.

ಡೋರ್ ನಂಬರ್ 1882/81 A ಅಳತೆ 115*115 ಅಡಿಗಳ ಸ್ವತ್ತು ಅಕ್ರಮವಾಗಿ ಬೇರೆಯವರಿಗೆ ಮಾಡಿಕೊಡಲಾಗಿದೆ. ಬಿಜೆಪಿಯವರು ಇದೇ ರೀತಿಯಲ್ಲಿ ಹಲವೆಡೆ ಮಾಡಿದ್ದು, ಇದೀಗ ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಪಕ್ಷೇತರ ಸದಸ್ಯ ಶಿವಪ್ರಕಾಶ್ ಅವರ ಪತ್ನಿ, ಅತ್ತಿಗೆ ಹೆಸರಿನಲ್ಲಿ ನಿವೇಶನ ರಿಜಿಸ್ಟರ್ ಆಗಿದೆ. ಈ ಬಗ್ಗೆಯೂ ತನಿಖೆ ಆಗಬೇಕು ಎಂದು ಹೇಳಿದರು.

ಮೂರು ವರ್ಷಗಳ ಕಾಲ ಅಧಿಕಾರ ನಡೆಸಿದ ಬಿಜೆಪಿಯವರು ಹಣಕ್ಕಾಗಿ ಅಧಿಕಾರಿಗಳನ್ನು ಬಳಸಿಕೊಂಡು ಅಕ್ರಮ ಕಾರ್ಯಗಳನ್ನು ಮಾಡಿಸಿದ್ದಾರೆ. ಈ ಕಾಲವಾಧಿಯಲ್ಲಿ ನಡೆದಿರುವ ಅಕ್ರಮಗಳ ಸಮಗ್ರ ತನಿಖೆಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸೂಚನೆ ನೀಡಿದ್ದು, ಕೆಲ ತಿಂಗಳಿನಲ್ಲಿಯೇ ಎಲ್ಲವೂ ಬಯಲಿಗೆ ಬರಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಕೆ. ಚಮನ್ ಸಾಬ್, ಪಾಮನಹಳ್ಳಿ ನಾಗರಾಜ್, ಉದಯ ಕುಮಾರ್, ಕಾಂಗ್ರೆಸ್ ಮುಖಂಡರಾದ ಜಗದೀಶ್, ಉಮೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ತಪ್ಪಿತಸ್ಥರ ವಿರುದ್ಧ ಕ್ರಮ

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾರ್ಕ್, ಸಾರ್ವಜನಿಕ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ ದೂರು ಬಂದಿದೆ. ಈ ಬಗ್ಗೆ ವರದಿ ನೀಡುವಂತೆ ಕಂದಾಯ ಹಾಗೂ ಪಾಲಿಕೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎಸ್. ಎಸ್. ಬಡಾವಣೆ 23ನೇ ವಾರ್ಡ್‌ಗೆ ಸೇರಿದ ಬುಸ್ನೂರು ಶಾಲೆ ಹಿಂಭಾಗದಲ್ಲಿ ಸಾರ್ವಜನಿಕ ಬಳಕೆಗೆ ಇರುವಂತಹ ಸರ್ಕಾರಿ ಜಾಗ ಕಬಳಿಕೆ ಮಾಡಿರುವ ಕುರಿತಂತೆ ದೂರು ಬಂದಿದೆ. ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಮಾರಾಟ ಮಾಡಿರುವ ಕುರಿತಂತೆಯೂ ಆಪಾದನೆ ಇದ್ದು, ವರದಿ ಬಂದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ಆಡಳಿತಾತ್ಮಕವಾಗಿ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕೋ ಅದೇ ರೀತಿಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯನ ಪತ್ನಿ, ಆತನ ಅಣ್ಣನ ಪತ್ನಿ ಹೆಸರಿನಲ್ಲಿ ಪಾರ್ಕ್ ಜಾಗ ಕಬಳಿಸಲಾಗಿದೆ ಎಂಬ ದೂರು ಬಂದಿದೆ. ಈ ಬಗ್ಗೆಯೂ ವರದಿ ಕೇಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಈ ಬಗ್ಗೆ ಮಾಹಿತಿ ಕೇಳಿದ್ದರು. ಮೇಲಾಧಿಕಾರಿಗಳ ಅನುಮತಿ ಇಲ್ಲದೇ, ಮೂಲ ದಾಖಲಾತಿ ಪರಿಶೀಲಿಸದೇ, ಪಾಲಿಕೆ ಉದ್ಯಾನವನ ಜಾಗವನ್ನು ಅಕ್ರಮವಾಗಿ ನಮೂನೆ -3ರಲ್ಲಿ ಸೇರಿಸಿ ಡೋರ್ ನಂಬರ್ ಕೊಡಲಾಗಿದೆ. ತಪ್ಪು ಎಸಗಿದ ಕಾರಣಕ್ಕೆ ಕಳೆದ ಜುಲೈ 14ರಂದು ಪಾಲಿಕೆಯ ಕಂದಾಯ ಇಲಾಖೆಯ ಕರ ವಸೂಲಿಗಾರರಾದ ಸಿ.ಸುನೀತಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+