Get Updates
Get notified of breaking news, exclusive insights, and must-see stories!

New Year Guidelines 2025: ದಾವಣಗೆರೆ ಪೊಲೀಸರಿಂದ ಮಾರ್ಗಸೂಚಿಗಳ ಬಿಡುಗಡೆ

New Year Guidelines 2025: 2024 ಮುಗಿದು 2025ರ ಹೊಸ ವರ್ಷಕ್ಕೆ ಜಿಗಿಯಲು ಇನ್ನೂ ಕೆಲವೇ ಕ್ಷಣಗಳು ಮಾತ್ರ ಬಾಕಿಯಿದೆ. ಇನ್ನೂ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯಾ ಜಿಲ್ಲೆಗಳಲ್ಲಿ ಮಾರ್ಗಸೂಚಿಗಳ್ನು ಹೊರಡಿಸಲಾಗಿದೆ. ಹಾಗಾದರೆ ದಾವಣಗೆರೆ ಜಿಲ್ಲೆಯಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

2025ರ ಡಿಸೆಂಬರ್ 1ರಂದು ರಾತ್ರಿ ಹೊಸ ವರ್ಷ ಆಚರಣೆ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷಾಚರಣೆ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಆಯೋಜಕರು, ಸಂಘಟನೆಗಳು ಮತ್ತು ಸಾರ್ವಜನಿಕರು ಯಾವೆಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಇಲ್ಲಿ ತಿಳಿಯಿರಿ.

Guidelines for New Year 2025 Celebration in Davanagere

* ದಾವಣಗೆರೆ ನಗರದ ವಿವಿಧ ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಕುಡಿದು ವಾಹನಗಳನ್ನು ಚಾಲನೆ ಮಾಡುವವರ, ತ್ರಿಬಲ್ ರೈಡಿಂಗ್ ಹಾಗೂ ವೀಲಿಂಗ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು.
* ದಾವಣಗೆರೆ ಸೇರಿದಂತೆ ಜಿಲ್ಲೆಯ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು, ನ್ಯಾಮತಿ ಪಟ್ಟಣಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
* ದಾವಣಗೆರೆ ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಪೊಲೀಸ್ ಅಧಿಕಾರಿ -ಸಿಬ್ಬಂದಿಯನ್ನು
ನಿಯೋಜಿಸಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
* ಜಿಲ್ಲೆಯಲ್ಲಿ ಬಾರ್ & ರೆಸ್ಟೋರೆಂಟ್, ವೈನ್ ಶಾಪ್‌ಗಳು ನಿಗಧಿಪಡಿಸಿದ ಸಮಯಕ್ಕೆ ಬಂದ್ ಮಾಡಲು ಸೂಚಿಸಲಾಗಿದೆ.
* ನಗರದ ಹೊರ ವಲಯಗಳಾದ ಕೊಂಡಜ್ಜಿ ಕೆರೆ, ದೇವರಬೆಳಕೆರೆ ಚೆಕ್ ಡ್ಯಾಂ ಮತ್ತು ಇತರೆ ಹೊರ ಬಾಗಗಳಲ್ಲೂ
ಪೊಲೀಸ್ ನಿಯೋಜನೆ ಮಾಡಲಾಗಿದೆ.
* ಹೊಸ ವರ್ಷಾಚರಣೆ ಕಾರ್ಯಕ್ರಮಗಳ ಆಯೋಜಕರುಗಳಿಗೆ ಈಗಾಲೇ ಯಾವುದೇ ಅವಘಡಗಳಿಗೆ ಅವಕಾಶ ಇರದಂತೆ ಸೂಕ್ತ ಪೂರ್ವ ಸಿದ್ಧತೆಗಳನ್ನು & ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಗಳನ್ನು ನೀಡಲಾಗಿರುತ್ತದೆ.
* ದಾವಣಗೆರೆ ನಗರದಲ್ಲಿ ಅಗತ್ಯವಿದ್ದ ಸೂಕ್ಷ್ಮ ಪ್ರದೇಶ ಕಡೆಗಳಲ್ಲಿ ಡ್ರೋನ್ ಮೂಲಕ ನಿಗಾವಹಿಸಲಾಗುವುದು.

ಪಾಲಿಸಬೇಕಾದ ಸೂಚನೆಗಳಿವು

* ಕಾರ್ಯಕ್ರಮದ ಆಯೋಜಕರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ಮುಕ್ತಾಯ ಮಾಡುವುದು.
* ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿ, ಕುಡಿದು ವಾಹನ ಚಾಲನೆ ಮಾಡುವುದು, ವಾಹನಗಳಲ್ಲಿ ಹೆಚ್ಚಿನ ಜನರು ಸವಾರಿ ಮಾಡಬಾರದು, ವೀಲಿಂಗ್ ಮಾಡುವುದನ್ನು ಮಾಡಬಾರದು.
* ಅಕ್ಕಪಕ್ಕದ ಜನರಿಗೆ ತೊಂದರೆಯಾಗದಂತೆ ವಿಶೇಷವಾಗಿ ಆಸ್ಪತ್ರೆಗಳು, ಅಪಾರ್ಟ್‌ಮೆಂಟ್‌ಗಳ ಸುತ್ತಮುತ್ತ ಮತ್ತು ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ/ಹೆಣ್ಣು ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು.
* ಯುವಕರು ಅಸಭ್ಯವಾಗಿ ವರ್ತನೆ ಮಾಡಿದರೆ ಹಾಗೂ ವಿಶೇಷವಾಗಿ ಹೆಣ್ಣು ಮಕ್ಕಳಿಗೆ ಚುಡಾಯಿಸುವುದು, ದಾಂದಲೇ ನಡೆಸುವುದು, ಮಹಿಳೆಯರಿಗೆ ತೊಂದರೆ ಉಂಟುಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
* ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮಧ್ಯ ನಶೆಯಲ್ಲಿ ಆಚರಣೆ ಮಾಡಿ ಸಾರ್ವಜನಿಕರಿಗೆ ಶಾಂತಿಗೆ
ತೊಂದರೆ ನೀಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ.
* ಹೊಸ ವರ್ಷಾಚರಣೆ ಕಾರ್ಯಕ್ರಮಗಳ ಆಯೋಜಕರುಗಳು ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸಬೇಕು.
* ಸಾರ್ವಜನಿಕರು ಮುಖ್ಯವಾಗಿ ಯುವಕರು ಬೇರೆಯವರಿಗೆ ತೊಂದರೆ ಆಗದ ರೀತಿಯಲ್ಲಿ ಹೊಸ ವರ್ಷಾಚರಣೆ
ಮಾಡಲು ಸೂಚಿಸಿದೆ.
* ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆ ಆಗುವಂತೆ ಜೋರಾಗಿ
ಕೂಗುವುದು, ಕಿರಿಚುವುದನ್ನು ನಿಷೇಧಿಸಿಲಾಗಿದೆ. ಒಂದ ವೇಳೆ ಈ ನಿಯಮ ಮೀರಿದರೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
* ಸಾರ್ವಜನಿಕ ಅಥವಾ ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು ಹಾಗೂ ಯಾವುದೇ ಅಗ್ನಿಅವಘಡಗಳು
ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
* ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112ಕ್ಕೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ.
* ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳು ಸುದ್ದಿ ಹರಡುವುದು, ಕಾನೂನು
ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್‌ಗಳನ್ನು ಹಾಕುವುದಾಗಲಿ, ಶೇರ್ ಮಾಡುವುದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುತ್ತದೆ.
* ಕರ್ಕಶವಾದ ಶಬ್ದವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಲೌಡ್ ಸ್ಪೀಕರ್‌ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆಯಾಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕಗಳನ್ನು ಬಳಸುವುದು. ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
* ನೈತಿಕ ಪೊಲೀಸ್ ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
* ಹೊಸ ವರ್ಷಾಚರಣೆ ನಡೆಸುವ ಆಯೋಜಕರು ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+