• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹತ್ರಾಸ್ ಅತ್ಯಾಚಾರ ಪ್ರಕರಣ: ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಅಕ್ಟೋಬರ್ 6: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯ ಮನಿಷಾ ವಾಲ್ಮೀಕಿ ಎಂಬ ದಲಿತ ಯುವತಿಯ ಅತ್ಯಾಚಾರವನ್ನು ಖಂಡಿಸಿ ವಾಲ್ಮೀಕಿ ಸಮಾಜ ಮತ್ತು ಎಡಪಂಥೀಯ ಸಂಘಟನೆಗಳಿಂದ ದಾವಣಗೆರೆಯ ಅಂಬೇಡ್ಕರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.

ಮನೀಷಾ ವಾಲ್ಮೀಕಿ ಎಂಬ 19 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ, ಅಂಬೇಡ್ಕರ್ ಸರ್ಕಲ್‌ನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ದಾವಣಗೆರೆ; ಮೆಕ್ಕೆಜೋಳ, ಅಡಿಕೆ ಖರೀದಿ ಕೇಂದ್ರ ಇನ್ನೂ ತೆರೆದಿಲ್ಲ

ಈ ವೇಳೆ ಮಾತನಾಡಿದ ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಅನಾಗರಿಕ ಘಟನೆ ಸಂಭವಿಸಿದ್ದು, ನಾಲ್ವರು ಕಾಮುಕರು ಸೇರಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಮಾಡಿ, ಆಕೆಯ ನಾಲಿಗೆ ಕತ್ತರಿಸಿ, ಬೆನ್ನು ಮೂಳೆ ಮುರಿದ್ದರು. ಆಕೆಯು ಎರಡು ವಾರಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಸೆಪ್ಟೆಂಬರ್ 28 ರಂದು ದೆಹಲಿಯ ಜಂಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾಳೆ.

ಈ ಮಧ್ಯೆ ಪೊಲೀಸರು ಮನೀಷಾಳ ಮೃತದೇಹವನ್ನು ಕುಟುಂಬಸ್ಥರ ಅನುಪಸ್ಥಿತಿಯಲ್ಲಿ ರಾತ್ರಿ 2.30ರ ವೇಳೆಯಲ್ಲಿ ಸುಟ್ಟಹಾಕಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಷ್ಟೇ ಅಲ್ಲದೇ ಮನೀಷಾಳ ಕುಟುಂಬಸ್ಥರನ್ನು ಭೇಟಿ ಮಾಡಲು ಪೊಲೀಸರು ಯಾರನ್ನು ಬಿಟ್ಟಿಲ್ಲ ಹಾಗೂ ಮನೀಷಾಳ ಕುಟುಂಬಸ್ಥರಿಗೆ ಠಾಕೂರ್ ಸಮುದಾಯದವರು ಅಪರಾಧಿಗಳ ಪರವಾಗಿ ನಿಂತು ಮನೀಷಾಳ ಕುಟುಂಬಸ್ಥರಿಗೆ ಜೀವ ಬೆದರಿಕೆ ಹಾಕುತ್ತಿರುವುದರಿಂದ ಇವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

ಮನೀಷಾಳ ಅತ್ಯಾಚಾರದಲ್ಲಿ ತೋಡಗಿರುವ ಆರೋಪಿಗಳಾದ ಸಂದೀಪ, ರಾಮು, ಲವಕುಶ ಮತ್ತು ರವಿ ಎನ್ನುವ ಕಾಮುಕರಿಗೆ ಅತ್ಯಂತ ಕಠಿಣವಾದ ಶಿಕ್ಷೆಯನ್ನು ನೀಡಿ, ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಉಪ ವಿಭಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

   DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada

   ಈ ವೇಳೆ ನಾಯಕ ಸಮಾಜದ ಮುಖಂಡ ಎಚ್.ಕೆ ರಾಮಚಂದ್ರಪ್ಪ, ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಘಟಕದ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಹೆಚ್ ಓಬಳಪ್ಪ, ತಾಲ್ಲೂಕು ನಾಯಕ ಸಮಾಜ ಮುಖಂಡ ಹದಡಿ ಹಾಲೇಶಪ್ಪ, ಜಿಲ್ಲಾ ನಾಯಕ ಸಮಾಜ ಅಧ್ಯಕ್ಷರು ಮತ್ತು ನಾಯಕ ಹಾಸ್ಟೆಲ್ ಅಧ್ಯಕ್ಷ ಬಿ.ವೀರಣ್ಣ, ಡಿ ಬಸವರಾಜು, ಸೇರಿದಂತೆ ಸಮುದಾಯದ ನೂರಾರು ಮುಖಂಡರು ಇದ್ದರು.

   English summary
   Valmiki Community staged a massive protest near the Ambedkar Circle in Davanagere condemning the rape of a Dalit young woman, Manisha Valmiki of Uttar Pradesh's Hathras district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X