ಸುಳ್ಳು ಹೇಳುವ ಎಚ್‌ಡಿಕೆ, ಸಿದ್ದರಾಮಯ್ಯಗೆ ನೊಬೆಲ್ ನೀಡಬೇಕು: ಈಶ್ವರಪ್ಪ
Recommended Video

ದಾವಣಗೆರೆ, ಡಿಸೆಂಬರ್ 21: ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರಿಗೂ ನೊಬೆಲ್ ಪ್ರಶಸ್ತಿ ಕೊಡಿಸಬೇಕು ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.
ರಾಜ್ಯ ಸರ್ಕಾರ ಕೇವಲ ಘೋಷಣೆಗಳನ್ನು ಮಾಡುತ್ತಿದೆ. ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸಲು ಸದನದಲ್ಲಿ ಅವಕಾಶವನ್ನೇ ನೀಡಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ವಿಚಾರದಲ್ಲಿ ಸ್ಪಷ್ಟ ನಿಲುವು ಇಲ್ಲ. ಇದು ವ್ಯರ್ಥ ಅಧಿವೇಶನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ. ಅನೇಕ ತಾಲ್ಲೂಕುಗಳಲ್ಲಿ ಕುಡಿಯಲು ನೀರಿಲ್ಲ. ಬೆಳೆದ ಬೆಳೆ ಒಣಗಿಹೋಗಿವೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಇಷ್ಟೆಲ್ಲ ಆದರೂ ಸಮ್ಮಿಶ್ರ ಸರ್ಕಾರದ ಯಾವ ನಾಯಕರೂ ಈ ಪ್ರದೇಶಗಳತ್ತ ತಲೆ ಹಾಕಿಲ್ಲ.

ಸಿದ್ದರಾಮಯ್ಯ ಮತ್ತು ದೇವೇಗೌಡ ಅವರು ಬರಪೀಡಿತ ಪ್ರದೇಶಗಳಿಗೆ ಜಂಟಿ ಪ್ರವಾಸ ಮಾಡಲಿ. ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ಕೇವಲ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಆರೋಪಿಸಿದರು.












Click it and Unblock the Notifications