ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಒಂದು ಮಳೆ ರೈತರ ಬದುಕನ್ನೇ ಮೂರಾಬಟ್ಟೆ ಮಾಡಿದೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 26: ದಾವಣಗೆರೆ ತಾಲ್ಲೂಕಿನಲ್ಲಿ ಸುರಿದ ಆ ಒಂದು ಮಳೆ, ರೈತರ ಬದುಕನ್ನೇ ಮೂರಾಬಟ್ಟೆ ಮಾಡಿದೆ. ಸಾಲ ಮಾಡಿ ಬೆಳೆದ ಭತ್ತದ ಬೆಳೆ ಇನ್ನೇನು ಕೈ ಸೇರಿತು ಎನ್ನುವಷ್ಟರಲ್ಲಿ ಸುರಿದ ಧಾರಾಕಾರ ಮಳೆ ರೈತರ ಬಾಳಿಗೆ ತಣ್ಣೀರೆರಚಿದೆ.

ಬೆಳೆ ಕಳೆದುಕೊಂಡ ರೈತರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದು, ಅಧಿಕಾರಿಗಳು ಇತ್ತ ಸುಳಿದಿಲ್ಲ. ಧಾರಾಕಾರ ಮಳೆಗೆ ನೆಲಕಚ್ಚಿದ ಫಸಲಿಗೆ ಬಂದ ಭತ್ತ ನೆಲಕ್ಕೆ ಬಿದ್ದಿದೆ.

ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆ

ದಾವಣಗೆರೆ ತಾಲ್ಲೂಕಿನ ಹಳೇ ಕುಂದುವಾಡ, ಭಾತಿ, ಲೋಕಿಕೆರೆ ಗ್ರಾಮಗಳಲ್ಲಿ ಜನರು ಇಷ್ಟು ದಿನ ಮಳೆ ಬಂದರೆ ಸಾಕು ಎಂದು ಆಕಾಶದ ಕಡೆ ಮುಖ ಮಾಡಿ ಕುಳಿತಿದ್ದರು. ಆದರೇ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆ ರೈತರ ಬದುಕನ್ನೇ ಮೂರಾಬಟ್ಟೆ ಮಾಡಿದೆ.

Heavy Rain In Davanagere District: Crop Damaged

ಗಾಳಿ, ಮಳೆಯ ರಭಸಕ್ಕೆ ಅಡಿಕೆ, ಬಾಳೆ, ಭತ್ತದ ಬೆಳೆ ಸಂಪೂರ್ಣವಾಗಿ ನೆಲಕಚ್ಚಿವೆ. ಸಾಲ ಮಾಡಿ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರ ಬದುಕಿನ ಜೊತೆ ವರುಣ ದೇವ ಚೆಲ್ಲಾಟವಾಡಿದ್ದಾನೆ. ಇದರಿಂದ ಪರಿತಪಿಸುವಂತಾಗಿದೆ.

ಮಳೆಯಿಂದಾಗಿ ಫಸಲಿಗೆ ಬಂದ ಅಡಿಕೆ, ಬಾಳೆ, ಪಪ್ಪಾಯಿ ತೋಟಗಳು ನೆಲಕ್ಕೆ ಉರುಳಿವೆ. ಅಷ್ಟೇ ಅಲ್ಲದೇ ಕಟಾವಿಗೆ ಬಂದ ಭತ್ತ ಸಂಪೂರ್ಣವಾಗಿ ಹಾಳಾಗಿದ್ದು, ರೈತರನ್ನು ಆತಂಕಕ್ಕೇ ದೂಡಿದೆ. ಮಳೆ ಯಾಕಾದರೂ ಬಂದಿದೆಯೋ ಏನೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ.

Heavy Rain In Davanagere District: Crop Damaged

ಇನ್ನೇನು ಮುಂದಿನ ವಾರ ಭತ್ತದ ಕೊಯ್ಲು ಶುರು ಮಾಡಬೇಕು ಎಂದುಕೊಂಡಿದ್ದ ರೈತರಿಗೆ ಬರಸಿಡಿಲು ಬಡಿದಂತಾಗಿದೆ. ಭತ್ತ ನೆಲಕ್ಕುರುಳಿ, ಕೊಳೆತು ಹೋಗುತ್ತದೆ ಎಂದು ರೈತರು ಕಣ್ಣೀರಿಟ್ಟಿದ್ದಾರೆ.

ಒಟ್ಟಿನಲ್ಲಿ ಅಕಾಲಿಕ ಮಳೆ ರೈತರ ಬದುಕನ್ನೇ ಕತ್ತಲೆಗೆ ದೂಡಿದೆ. ಎಕರೆಗೆ 25 ಸಾವಿರ ರೂ. ಖರ್ಚು ಮಾಡಿ ಕಷ್ಟಪಟ್ಟು ಬೆಳೆದ ಭತ್ತ, ನೀರಲ್ಲಿ ಮುಳುಗಿ ಹೋಗಿದೆ. ಇಷ್ಟಾದರೂ ಅಧಿಕಾರಿಗಳು ಇತ್ತ ಸುಳಿದಿಲ್ಲ. ಇನ್ನಾದರೂ ಸರ್ಕಾರ ಎಚ್ಚೆತ್ತು, ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡುವ ಮೂಲಕ ರೈತರ ಕಣ್ಣೀರೊರೆಸಬೇಕಿದೆ.

Recommended Video

Surya Kumar Yadav ರನ್ನು Australia ತಂಡಕ್ಕೆ ಈಗಲೂ ಆಯ್ಕೆ ಮಾಡಿಲ್ಲ | Oneindia Kannada

English summary
Heavy rainfall in the villages of Old Kunduwada, Bhati and Lokikere in Davanagere taluk has been Crop damaged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X