ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ: ಎಸ್.ಪಿ ಉಮಾ ಪ್ರಶಾಂತ್

ದಾವಣಗೆರೆ, ನವೆಂಬರ್‌ 15: 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‌ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದರು.

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 6,16,353 ಖಾಸಗಿ ಹಾಗೂ ಸರ್ಕಾರಿ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸಬೇಕಾಗಿದೆ.

high-security-number-plates-are-mandatory

ಇದರಿಂದ ಅಪರಾಧಿಗಳು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸುವ ನಕಲಿ ನೋಂದಣಿ ಸಂಖ್ಯೆಗಳನ್ನು ತಡೆಗಟ್ಟಬಹುದು ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ಟ್ರ್ಯಾಕ್ ಮಾಡಬಹುದಾಗಿದೆ ಎಂದರು.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ.

ವಾಹನ ಮಾಲಿಕರು ಆನ್‍ಲೈನ್ ವೆಬ್‍ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದರು.

high-security-number-plates-are-mandatory

ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್‌ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕ ಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೆ.ಎಸ್.ಆರ್.ಟಿ.ಸಿ ಡಿ.ಸಿ ಶ್ರೀನಿವಾಸ್ ಮಾತಾನಾಡಿ, ದಾವಣಗೆರೆ ಘಟಕದ 56 ಕೆ.ಎಸ್.ಆರ್.ಟಿ ಸಿ ಬಸ್ಸುಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲಾಗಿದ್ದು, ಬಾಕಿಯಿರುವ 323 ಸರ್ಕಾರಿ ಸಾರಿಗೆ ಬಸ್ಸುಗಳಿಗೆ ಶೀಘ್ರವೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ಕ್ರಮ ವಹಿಸಲಾಗುತ್ತದೆ.

ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದರು. ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್‌ಕುಮಾರ್‌, ಸಂತೋಷ್, ಆರ್.ಟಿ.ಒ ಪ್ರಮತೇಶ್‌ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+