ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಸ್ ಓಡಿಸಿದ್ದು ರೇಣುಕಾಚಾರ್ಯ, ನೋಟೀಸ್ ಬಂದಿದ್ದು ಡಿಪೋ ಮ್ಯಾನೇಜರ್ ಗೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 7: ಮೊನ್ನೆಯಷ್ಟೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಹೊಸ ಮಾರ್ಗದಲ್ಲಿ ಬಸ್ ಸಂಚಾರ ಆರಂಭದ ವೇಳೆ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕೆಎಸ್ ಆರ್‌ಟಿಸಿ ಬಸ್ ಚಾಲನೆ ಮಾಡಿ ಸುದ್ದಿಯಾಗಿದ್ದರು. ಆದರೆ ಈಗ ಬಸ್ ಚಾಲನೆ ಮಾಡಿದ್ದಕ್ಕೆ ನೋಟೀಸ್ ಬಂದಿದೆ. ಶಿವಮೊಗ್ಗದ ಕೆಎಸ್ಆರ್ ಟಿಸಿ ಡಿಸಿಟಿ ಆರ್ ನವೀನ್ ಕುಮಾರ್ ಘಟನೆ ಬಗ್ಗೆ ವಿವರಣೆ ಕೇಳಿ ಹೊನ್ನಾಳಿ ಘಟಕ ವ್ಯವಸ್ಥಾಪಕ ಮಹೇಶ್ವರಪ್ಪರಿಗೆ ನೋಟೀಸ್ ನೀಡಿದ್ದಾರೆ.

ಭಾನುವಾರ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಗೊಲ್ಲರಹಳ್ಳಿ, ಬೆನಕಹಳ್ಳಿ, ಉಜ್ಜನಿಪುರ, ರಾಂಪುರ, ಸಾಸ್ವೇಹಳ್ಳಿ ಗ್ರಾಮಗಳ ಮಾರ್ಗವಾಗಿ ಹೊಸದಾಗಿ ಕೆಎಸ್ಆರ್ ಟಿಸಿ ಬಸ್ ಚಾಲನೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ತಾವೇ ಚಾಲಕನ ಯೂನಿಫಾರಂ ಹಾಕಿಕೊಂಡು ಗ್ರಾಮಗಳಿಗೆ ಬಸ್ ಚಲಾಯಿಸಿದರು.

ಮತ್ತೆ ಸುದ್ದಿಯಲ್ಲಿ ರೇಣುಕಾಚಾರ್ಯ, ಚಾಲಕನಾದ ಹೊನ್ನಾಳಿ ಶಾಸಕಮತ್ತೆ ಸುದ್ದಿಯಲ್ಲಿ ರೇಣುಕಾಚಾರ್ಯ, ಚಾಲಕನಾದ ಹೊನ್ನಾಳಿ ಶಾಸಕ

Honnali KSRTC Depo Manager Got Notice For Renukacharya Driving Bus

ರೇಣುಕಾಚಾರ್ಯ ಬಸ್ ಚಲಾಯಿಸಿದ್ದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ‌ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಶಾಸಕ ಎಂ.ಪಿ.ರೇಣುಕಾಚಾರ್ಯ ಚಾಲಕನ ಸಮವಸ್ತ್ರ ಧರಿಸಿ ಸುಮಾರು 60 ಕಿಮೀ ಬಸ್ ಓಡಿಸಿದ್ದರು. ಕೆಎಸ್ಆರ್ ಟಿಸಿ ಬಸ್ ಗಳನ್ನು ಕೇವಲ‌ ನಿಗಮದ ಚಾಲಕರು ಹಾಗೂ ಇಲಾಖೆಯ ಪರವಾನಿಗೆ ಪಡೆದವರು ಚಲಾಯಿಸಬೇಕು ಅದಲ್ಲದೆ ಶಾಸಕರು ಪ್ರಯಾಣಿಕರನ್ನು ಕೂರಿಸಿಕೊಂಡು ಬಸ್ ಚಲಾಯಿಸಿರುವುದಕ್ಕೆ ವಿವರಣೆ ನೀಡುವಂತೆ ಕೆಎಸ್ ‌ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸ್ವಪ್ರೇರಣೆಯಿಂದ ಹೊನ್ನಾಳಿ ಘಟಕ ವ್ಯವಸ್ಥಾಪಕ ಮಹೇಶ್ವರಪ್ಪ ಅವರಿಗೆ ನೋಟೀಸ್ ನೀಡಿದ್ದಾರೆ.

English summary
The Honnavali MLA Renukachcarya was in news by driving bus in new route started in Honnali in Davanagere district. But now a notice has been issued for the depo manager,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X