ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ವಿಧಿಯೇ ನೀನೆಷ್ಟು ಕ್ರೂರಿ'': ಸೋಂಕಿತನ ಅಂತ್ಯಸಂಸ್ಕಾರ ಮಾಡಿ ಭಾವುಕರಾದ ರೇಣುಕಾಚಾರ್ಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 1: ದಾವಣಗೆರೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಯ ಡಿ ಗ್ರೂಪ್ ನೌಕರನ 30 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಪುತ್ರ ಸಾವಿಗೀಡಾಗಿದ್ದು, ಅಂತ್ಯಸಂಸ್ಕಾರ ನೆರವೇರಿಸಲು ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು.

Recommended Video

ಕೊರೊನಾದಿಂದ ಮೃತಪಟ್ಟ ವ್ಯಕ್ತಿಯಿದ್ದ ಆಂಬುಲೆನ್ಸ್ ಚಾಲನೆ ಮಾಡಿದ Renukacharya | Oneindia Kannada

ಈ ವೇಳೆ ಹೊನ್ನಾಳಿ ಶಾಸಕ ಎಂ.ಪಿ‌ ರೇಣುಕಾಚಾರ್ಯ ಅವರೇ ಆಂಬ್ಯುಲೆನ್ಸ್ ಚಾಲನೆ ಮಾಡಿಕೊಂಡು ಮೃತದೇಹ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ನಡೆದಿದೆ.

ಮಂಗಳವಾರ ಬೆಳಗ್ಗೆ ಕೋವಿಡ್ ವಾರ್ಡ್‌ಗೆ ಹೋಗಿ ಆರೋಗ್ಯ ವಿಚಾರಿಕೊಂಡು ಬಂದಿದ್ದ ಶಾಸಕ ರೇಣುಕಾಚಾರ್ಯ, ಯುವಕನನ್ನು ಮಾತನಾಡಿಸಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದರು. ಆದ್ರೆ ಸ್ವಲ್ಪ ಸಮಯದ ನಂತರವೇ ಯುವಕ ಕೊರೊನಾ ಸೋಂಕಿಗೆ ಬಲಿಯಾದರು.

Davanagere: Honnali MLA Renukacharya Performs Last Rites Of Man Who Died of Covid-19

ಆತನ ಶವವನ್ನು ಊರಿಗೆ ತರುವುದು ಬೇಡ ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ಆಗ ಶಾಸಕ ಎಂ.ಪಿ ರೇಣುಕಾಚಾರ್ಯ ಅವರೇ ತೆರಳಿ ಹೊನ್ನಾಳಿ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡಿಸಿದ್ದಾರೆ.

Davanagere: Honnali MLA Renukacharya Performs Last Rites Of Man Who Died of Covid-19

ಆತನ ಪೋಷಕರು ಆಕ್ರಂದನ ಮುಗಿಲು ಮುಟ್ಟಿತ್ತು. ಈ ವೇಳೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ""ದುಃಖ ತಡೆದುಕೊಳ್ಳಲು ಸಾಧ್ಯವಾಗಲಿಲ್ಲ, ಮೃತ ಯುವಕನ ತಾಯಿಯ ಗೋಳಾಟ ನನ್ನ ಕಣ್ಣಗಳಲ್ಲಿ ನೋಡಲು ಸಾಧ್ಯವಾಗಲಿಲ್ಲ, ವಿಧಿಯೇ ನಿನೇಷ್ಟು ಕ್ರೂರಿ'' ಎಂದಿದ್ದಾರೆ.‌

English summary
Davanagere: Honnali MLA Renukacharya Performs Last Rites of Young Man Who Died of Covid-19. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X