ಐಪಿಎಸ್ ರವೀಂದ್ರನಾಥ್ ರಾಜೀನಾಮೆ ನಾನು ಕಾರಣ ಅಲ್ಲ: ರೇಣುಕಾಚಾರ್ಯ
ದಾವಣಗೆರೆ, ಮೇ.12: ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್ ರಾಜೀನಾಮೆ ನೀಡಲು ನಾನು ಕಾರಣನಲ್ಲ. ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ವಿನಾಕಾರಣ ನನ್ನ ಮೇಲೆ ಆರೋಪ ಮಾಡಿ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ರವೀಂದ್ರನಾಥ್ ಅವರು ನೊಟೀಸ್ ಜಾರಿ ಮಾಡಿದ್ದರು. ಆದರೆ ಬಿಜೆಪಿ ಸರ್ಕಾರ ಇವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಡಿಕೆ ಶಿವಕೂಮಾರ್ ಆರೋಪಕ್ಕೆ ತಿರುಗೇಟು ಕೊಟ್ಟರು.

ಡಿಕೆ ಶಿವಕುಮಾರ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ..!
ಡಿಕೆ ಶಿವಕುಮಾರ್ ವಿನಾಕಾರಣ ನನ್ನ ಮೇಲೆ ಆರೋಪ ಮಾಡುವುದನ್ನು ಬಿಡಬೇಕು. ಇವರ ಆರೋಪಕ್ಕೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಜನರೇ ತಕ್ಕ ಉತ್ತರ ನೀಡಿದ್ದಾರೆ ಎಂದರು. ಬಿಜೆಪಿ ಸಚಿವರ ಮೇಲೆ ಡಿಕೆ ಶಿವಕುಮಾರ್ ಅವರು ನಿರಂತರ ಆರೋಪ ಮಾಡುತ್ತಾ ಬರುತ್ತಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ನಡುವೆ ಮುಖ್ಯಮಂತ್ರಿ ಆಗಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಶೀತಲ ಸಮರ ನಡೆಯುತ್ತಲೇ ಇದೆ. ಸಿಎಂ ಆಗುತ್ತೇನೆ ಅಂದುಕೊಂಡು ಡಿಕೆ ಶಿವಕುಮಾರ್ ಅವರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಎಬಿಸಿಡಿ ಎಂದು ಗುಂಪುಗಳಿವೆ. ಆದರೆ ಬಿಜೆಪಿಯಲ್ಲಿ ಯಾವುದೇ ಗುಂಪುಗಳಿಲ್ಲ ಎಂದು ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದರು.

ರಾಜ್ಯದಲ್ಲಿ ಮುಂಬರುವ 2023ರ ಚುನಾವಣೆಯಲ್ಲಿ ನಾವೆಲ್ಲರೂ ಒಟ್ಟಾಗಿ ಚುನಾವಣೆಗೆ ಹೋಗುತ್ತೇವೆ. ಕಾಂಗ್ರೆಸ್ ಮುಳುಗುವ ಹಡಗು, ಕಾಂಗ್ರೆಸ್ ಅದೋಗತಿಗೆ ತಲುಪಿರುವ ಪಕ್ಷ. ಇದಕ್ಕೆ ಡಿಕೆ ಶಿವಕುಮಾರ್ ಕ್ಯಾಪ್ಟನ್ ಆಗಿದ್ದಾರೆ ಎಂದು ಹಿರಿಯ ಐಪಿಎಸ್ ಅಧಿಕಾರಿ ವೀಂದ್ರನಾಥ್ ರಾಜೀನಾಮೆ ಕುರಿತು ಡಿಕೆಶಿ ಆರೋಪಕ್ಕೆ ದಾವಣಗೆರೆ ತಿರುಗೇಟು ಕೊಟ್ಟರು.












Click it and Unblock the Notifications