ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತನಾಗಿರುವುದಕ್ಕೆ 3 ಬಾರಿ ಸಿಎಂ ಪಟ್ಟ ಕೈತಪ್ಪಿತು: ಪರಮೇಶ್ವರ್

|
Google Oneindia Kannada News

ದಾವಣಗೆರೆ, ಫೆಬ್ರವರಿ 25: 'ನಾನು ದಲಿತ ಎಂಬ ಕಾರಣಕ್ಕೆ ಮುರು ಬಾರಿ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡೆ' ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಭಾನುವಾರ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡುತ್ತಿದ್ದ ಪರಮೇಶ್ವರ್, "ನಾನು ದಲಿತ ಸಮುದಾಯಕ್ಕೆ ಸೇರಿದವನಾಗಿರುವ ಕಾರಣ ಮೂರು ಬಾರು ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಪಿಕೆ ಬಸವಲಿಂಗಪ್ಪ, ಕೆ ಎಚ್ ರಂಗನಾಥ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಏನೇ ಆಗಲಿ, ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರು" ಎಂದು ಪರಂ ಹೇಳಿದ್ದರು.

I was thrice denied CM post as I am a dalit: DyCM G Parameshwar

ಪರಮೇಶ್ವರ್‌ ಉಪಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದ್ದೇ ನಾನು: ಸಿದ್ದರಾಮಯ್ಯಪರಮೇಶ್ವರ್‌ ಉಪಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದ್ದೇ ನಾನು: ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಜಿ ಪರಮೇಶ್ವರ್ ಅವರು ಕೊರಟಗೆರೆಯಲ್ಲಿ ಸೋಲನುಭವಿಸಲು ಮತ್ತು ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಲು ಸಿದ್ದರಾಮಯ್ಯ ಅವರೇ ಕಾರಣ ಎನ್ನಲಾಗಿತ್ತು. ಆದರೆ ಹೊಸ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗುವಂತೆ ಒತ್ತಾಯಿಸಿದ್ದೇ ನಾವು. ನಮ್ಮ ನಡುವೆ ಯಾವುದೇ ಕಂದಕ ಇರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ಪರಮೇಶ್ವರ್ ನೀಡಿದ ಹೇಳಿಕೆ ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.

English summary
Karnataka Dy CM,G Parameshwara at an event in Davangere said, He was thrice denied CM post as he belonged to Dalit community,said, "PK Basavalingappa & KH Ranganath missed the CM post.Mallikarjun Kharge also couldn't become CM. I missed it thrice. Somehow, I was made Dy CM."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X