2028ರ ವಿಧಾನಸಭಾ ಚುನಾವಣೆಗೆ ಶಾಮನೂರು ಶಿವಶಂಕರಪ್ಪಗೆ ಸಿಗುತ್ತಾ ಟಿಕೆಟ್‌?

ದಾವಣಗೆರೆ,ಜೂನ್‌ 17: ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಈ ವೇಳೆ ಶಾಮನೂರು ಶಿವಶಂಕರಪ್ಪ ಅವರ ಬಗ್ಗೆ ಮೆಚ್ಚುಗೆ ಮಾತುಗಳನ್ನ ಸಿದ್ದರಾಮಯ್ಯ ಅವರು ನುಡಿದಿದ್ದಾರೆ. 95 ವರ್ಷ ವಯಸ್ಸಿನವರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಮುಂದಿನ( 2028 ) ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗುತ್ತಾ ಅಥವಾ ಹೊಸ ಮುಖಕ್ಕೆ ಕಾಂಗ್ರೆಸ್‌ ಮಣೆ ಹಾಕುತ್ತಾ ಎನ್ನುವ ಚರ್ಚೆಗಳು ಕೈ ಪಾಳಯದಲ್ಲಿ ನಡೆಯುತ್ತಿದೆ.

ಈ ಕುರಿತು ನಿನ್ನೆ(ಜೂನ್‌ 16, ಸೋಮವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದು ತಿಳಿಸಿದರು.

If Shamanur Shivashankarappa Agrees Ticket For 2028 Elections Too Siddaramaiah

ಇನ್ನೂ ಅಂತರ್ಜಾತಿ ಸಾಮೂಹಿಕ‌ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ. ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ‌ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ. ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.

ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.

ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು. ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+