Ration: 1,13,100 ರೂಪಾಯಿ ಮೌಲ್ಯದ ಅಕ್ರಮ ಪಡಿತರ ಸಾಗಾಟ: ಮುಂದೇನಾಯ್ತು ಗೊತ್ತಾ?
Ration: ರಾಜ್ಯದಲ್ಲಿ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಅಕ್ರಮವಾಗಿ ಪಡಿತರ ಸಾಗಾಟ ಮಾಡುತ್ತಿರುವ ಘಟನೆಗಳು ಸಹ ಬೆಳಕಿಗೆ ಬರುತ್ತಿವೆ. ಇಂತಹದ್ದೇ ಘಟನೆಯೊಂದು ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಹಲವೆಡೆ ಅಕ್ರಮ ಪಡಿತರ ಸಾಗಾಟ ಪ್ರಕರಣಗಳು ಬೆಳಕಿಗೆ ಬಂದ ಉದಾಹರಣೆಗಳಿವೆ. ಇದೀಗ ಅಕ್ರಮ ಪಡಿತರ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಯಿಂದ 1,13,100 ರೂಪಾಯಿ ಮೌಲ್ಯದ ಒಟ್ಟು 76 ಪ್ಲಾಸ್ಟಿಕ್ ಚೀಲದ ತುಂಬಿದ್ದ ಒಟ್ಟು 3,770 ಕೆಜಿ ಪಡಿತರ ರಾಗಿ ಹಾಗೂ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ನವೆಂಬರ್ 2ರಂದು ದಾವಣಗೆರೆ ಪಿಜಿ ಬಡಾವಣೆ 8ನೇ ಮುಖ್ಯ ರಸ್ತೆಯ, ಮೋತಿ ವೀರಪ್ಪ ಕಾಲೇಜ್ ಪಕ್ಕದ ರಸ್ತೆಯಲ್ಲಿ ಗೂಡ್ಸ್ ವಾಹನದಲ್ಲಿ ಪಡಿತರ ವ್ಯವಸ್ಥೆಯ ರಾಗಿಯನ್ನು ಅಕ್ರಮವಾಗಿ ವಾಹನದಲ್ಲಿ ಸಾಗಿಲು ವಾಹವನ್ನು ನಿಲ್ಲಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಮಾಹಿತಿ ಬಂದಿತ್ತು.
ಈ ಮಾಹಿತಿ ಆಧಾರದ ಮೇಲೆ ಪಿಎಸ್‌ಐ ಸಾಗರ್ ಅತ್ತರ್ ವಾಲಾ ಹಾಗೂ ಸಿಬ್ಬಂದಿ, ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಅನ್ನಪೂರ್ಣಮ್ಮ ಹಾಗೂ ಸಿಬ್ಬಂದಿಗಳ ತಂಡ ಆಹಾರ ನಿರೀಕ್ಷಕ ಮಂಜುನಾಥ್ ಟಿ ಗೂಡ್ಸ್ ವಾಹನ ಬಳಿ ಹೋಗಿ ಪರಿಶೀಲನೆ ನಡೆಸುದ್ದಾರೆ. ಆಗ ಆ ವಾಹನದಲ್ಲಿ ಅಕ್ರಮವಾಗಿ ಪಡಿತರದ ರಾಗಿ ಮೂಟೆಗಳು ಇರುವುದು ಸ್ಪಷ್ಟವಾಗಿದೆ. ನಂತರ ತಕ್ಷಣ ಪಡಿತರ ರಾಗಿ ಸಹಿತ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಟ್ಟನಿಟ್ಟಿನ ಕ್ರಮ: ಅನ್ನಭಾಗ್ಯ ಯೊಜನೆ ಪಡಿತರ ಅಕ್ರಮ ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ದಾವಣಗೆರೆ ಜಿಲ್ಲಾಧಿಕಾರಿ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಪಡಿತರವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸೂಕ್ತ ಕ್ರಮ ಜರುಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ.
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಿಸಲು ಪ್ರಮುಖ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು ಮತ್ತು ಎಫ್‍ಐಆರ್ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಇತ್ತೀಚೆಗಷ್ಟೇ ಸೂಚನೆ ನೀಡಿದ್ದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳೊಂದಿಗೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ಕುರಿತು ಸಭೆ ಆಯೋಜನೆ ಮಾಡಲಾಗುತ್ತಿ. ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾಧಿಕಾರಿಗಳು, ಮಧ್ಯವರ್ತಿಗಳು ಹಣದ ಆಮಿಷವೊಡ್ಡಿ ಬಡವರಿಂದ ಅಕ್ಕಿ ಖರೀದಿ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಸೂಚಿಸಿದರು.
ಮನಗಳಿಗೆ ಹೋಗಿ ಅನ್ನಭಾಗ್ಯ ಯೋಜನೆಯ ಅಕ್ಕಿ ಸಂಗ್ರಹಿಸಿ ಅದನ್ನು ರಾಜ್ಯದ ಗಡಿಯಾಚೆಗೆ ಮಾರಾಟ ಮಾಡತ್ತಿರುವ ಆರೋಪ ಕೇಳಿಬಂದಿದೆ. ಅದರಲ್ಲೂ ನ್ಯಾಮತಿ ತಾಲ್ಲೂಕುಗಳಲ್ಲಿ ಅತೀ ಹೆಚ್ಚಾಗಿ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿಯೂ ಕಾಳಸಂತೆಯಲ್ಲಿ ಮಾರಾಟ ಆಗುತ್ತಿದೆ. ಬಳಿಕ ಅದನ್ನು ಹೊರ ದೇಶಗಳಿಗೆ ಕಳುಹಿಸಲಾಗುತ್ತಿದೆ. ಗಂಜಿ ಮಾಡಲು ತೆಗೆದುಕೊಂಡು ಹೋಗುತ್ತಿದ್ದಾರೆ. ಅದ್ದರಿಂದ ಇದನ್ನು ತಡೆಗಟ್ಟಲು ನಗರದ ಪ್ರಮುಖ ಪ್ರದೇಶಗಳಲ್ಲಿ ಸಿ.ಸಿ ಕ್ಯಾಮರಾಗಳನ್ನು ಅಳವಡಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡಲಾಗುತ್ತಿದೆ. ಇದನ್ನು ಅರ್ಹರಲ್ಲದವರು ಕೂಡ ಕಡಿಮೆ ಬೆಲೆಗೆ ಖರೀದಿ ಮಾಡಿ ಹೊರ ಜಿಲ್ಲೆಗಳಿಗೆ ಸಾಗಿಸುತ್ತಿದ್ದಾರೆ. ಬಡವರಿಗೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ವ್ಯವಸ್ಥಿತವಾಗಿ ರೈಸ್ ಮಿಲ್‍ಗಳ ಗೋಡೌನ್ ಸೇರುತ್ತಿದೆ. ಈ ಮೂಲಕ ಬಡವರ ಹೊಟ್ಟೆಗೆ ಕಲ್ಲು ಹಾಕುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ದಾವಣಗೆರೆಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್ ದುರ್ಬಳಕೆ ಮಾಡುವವರು ಒಂದು ಕಡೆಯಾದ್ರೆ, ಮತ್ತೊಂದೆಡೆ ಇನ್ನೂ ಕೆಲವರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ದೊಡ್ಡಿಗೆ ಮಾರಾಟ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಅಲ್ಲದೆ, ಜಿಲ್ಲಾ ಮಟ್ಟದಲ್ಲೂ ಕೂಡ ಆಯಾ ಜಿಲ್ಲಾಧಿಕರಿಗಳು ಸಹ ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.












Click it and Unblock the Notifications