2040ಕ್ಕೆ ಚಂದ್ರನ ಮೇಲೆ ಭಾರತೀಯರ ಪದಾರ್ಪಣೆ ಖಚಿತ ಅಂತೆ ಹೌದಾ.?
ದಾವಣಗೆರೆ, ಮಾರ್ಚ್, 12: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಪ್ರಸ್ತುತ ಸ್ವಾವಲಂಬಿಯಾಗಿ ಸಿದ್ಧಗೊಳ್ಳುತ್ತಿದೆ. ಇದು 2035ರ ವೇಳೆಗೆ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವ ಮತ್ತು 2040ರ ವೇಳೆಗೆ ಚಂದ್ರನ ಮೇಲೆ ಇಳಿಯುವ ಭೂಕಕ್ಷೆಗೆ ಭಾರತೀಯರನ್ನು ಕರೆದೊಯ್ಯುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ, ವಿಜ್ಞಾನಿ ಎ.ಎಸ್.ಕಿರಣಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ನಡೆದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಸ್ವಾತಂತ್ರ‍್ಯದ ನಂತರ ಭಾರತವು ಉತ್ತಮ ಜೀವನ ಪರಿಸ್ಥಿತಿಗಳನ್ನು ಒದಗಿಸಲು ಆದ್ಯತೆ ನೀಡಿದೆ. ಜೀವನ ಮಟ್ಟವನ್ನು ಸುಧಾರಿಸಲು ವಿಜ್ಞಾನ ಮತ್ತು ತಂತ್ರಜ್ಞಾನ ಆಧಾರಿತ ಸಾಧನಗಳನ್ನು ಬಳಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ ಎಂದರು.

ಬಾಹ್ಯಾಕಾಶ ತಂತ್ರಜ್ಞಾನದ ಸಾಮರ್ಥ್ಯವನ್ನು ಉನ್ನತೀಕರಿಸಲು ಭಾರತವು ತನ್ನ ಸಂಪನ್ಮೂಲಗಳನ್ನು ಅತ್ಯಂತ ನವೀನ ಮತ್ತು ಪರಿಣಾಮಕಾರಿಯಾಗಿ ಬಳಸಿದೆ. ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಅತ್ಯಂತ ಸಮರ್ಥ ಶಕ್ತಿಯಾಗಲು ಗುಣಮಟ್ಟ ಮತ್ತು ಸಾಮರ್ಥ್ಯವನ್ನು ವರ್ಧಿಸಲು ತನ್ನನ್ನು ತಾನು ಸಿದ್ಧಪಡಿಸುತ್ತಿದೆ ಎಂದು ಹೇಳಿದರು.
ಬಾಹ್ಯಾಕಾಶ ಕ್ಷೇತ್ರದ ಅಭಿವೃದ್ಧಿಯಲ್ಲಿ ಭಾರತ ಎದುರಿಸಿದ ಸಮಸ್ಯೆಗಳು, ಸವಾಲುಗಳು ಹಲವು. ಆದರೆ ಅವೆಲ್ಲವೂ ಸ್ವಾವಲಂಬನೆಯನ್ನು ಸಾಧಿಸಲು ಪ್ರೇರಣೆಯಾದವು. ಬಾಹ್ಯಾಕಾಶ ತಂತ್ರಜ್ಞಾನದ ಬಳಕೆ, ಸಂವಹನ, ಪ್ರಸಾರ, ಹವಾಮಾನ ಮೇಲ್ವಿಚಾರಣೆ, ಸಂಪನ್ಮೂಲಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ರಿಮೋಟ್ ಸೆನ್ಸಿಂಗ್, ಆಕಾಶ ವೀಕ್ಷಿಸಲು ಮತ್ತು ನಿರ್ವಹಿಸಲು ಅಗತ್ಯವಿರುವ ಸೂಕ್ತವಾದ ಸಂಪನ್ಮೂಲಗಳನ್ನು ಒದಗಿಸುವಲ್ಲಿನ ತೊಂದರೆಯ ನಡುವೆಯೂ ಸ್ವಸಾಮರ್ಥ್ಯದೊಂದಿಗೆ ಅಳವಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸವಾಲುಗಳು, ಗುರಿಗಳು ದೊಡ್ಡ ಅವಕಾಶಗಳನ್ನು ತೆರೆಯುತ್ತವೆ. ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲು ಮುಂಬರುವ ವರ್ಷಗಳಲ್ಲಿ ಸಾಧನೆಗೆ ವಿವಿಧ ಕ್ಷೇತ್ರಗಳಲ್ಲಿ ವಿಶಾಲವಾದ ಅವಕಾಶಗಳಿವೆ. ಯುವಜನರು ಜ್ಞಾನ, ಕೌಶಲ, ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಮತ್ತು ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರಗಳಲ್ಲಿನ ಬೆಳವಣಿಗೆಗಳು ಮಾಹಿತಿ ಮತ್ತು ಸಾರಿಗೆ ಸಂಚಾರ ಸಾಗಣೆಯ ವೇಗವನ್ನು ಬದಲಾಯಿಸುತ್ತಿದೆ. ಇದು ಮಾನವನ ಭೂಮಿಯ ಮೇಲಿನ ವಾಸದ ರೀತಿಯಲ್ಲಿ ತಂತ್ರೋನ್ಮಾನ ಬದಲಾವಣೆಗಳೂ ಪ್ರೇರಣೆಯಾಗುತ್ತಿದೆ. ಇದು ಮಾನವನ ಅಂತರ್ಗತ ಪ್ರತಿರೋಧದಿಂದ ಉದ್ಭವಿಸುವ ಸಂಘರ್ಷ ಹೆಚ್ಚಾಗಿ ದೇಹ ಮತ್ತು ಮಾನಸಿಕ ಸಂಬಂಧಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅನಾದಿ ಕಾಲದಿಂದಲೂ ಮಾನವರು ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ವೀಕ್ಷಿಸಲು, ಜೀವನದ ಅಗತ್ಯಕ್ಕೆ ತಕ್ಕಂತೆ ಆವಿಷ್ಕಾರಗಳ ಮೊರೆ ಹೋಗಿದ್ದಾರೆ. ದೈಹಿಕ ಶಕ್ತಿಗೆ ಅಗತ್ಯವಾಗಿ ಬದುಕಲು ಹೋರಾಟವಿತ್ತು. ಅನಿವಾರ್ಯತೆಗಾಗಿ ಹರಿತವಾದ ಕಲ್ಲು, ಬಿಲ್ಲು, ಬಾಣಗಳು ಮೊದಲಾದ ಸಾಧನಗಳನ್ನು ವಿಕಸನಗೊಳಿಸಿ, ಪರಿಣಾಮಕಾರಿ ಮಾರ್ಗಗಳನ್ನು ಕಂಡುಕೊಂಡರು.
ಸಂಚಾರಕ್ಕೆ ಪ್ರಾಣಿಗಳನ್ನು ಬಳಸಿಕೊಂಡ, ಚಾಲಿತ ವಾಹನಗಳನ್ನು ಕಂಡು ಹಿಡಿದ. ಜಲಚರಗಳನ್ನು ಗಮನಿಸಿ, ತೆಪ್ಪ, ದೋಣಿ, ಹಡಗುಗಳನ್ನು ಸಾಧನಗಳನ್ನು ನಿರ್ಮಿಸಿದರು. ದೂರದ ವಸ್ತು ವೀಕ್ಷಿಸಲು ದೂರದರ್ಶಕ, ಚಿಕ್ಕ ವಸ್ತುಗಳನ್ನು ವರ್ಧಿಸಲು ಸೂಕ್ಷ್ಮ ದರ್ಶಕಗಳನ್ನು ಅಭಿವೃದ್ಧಿಪಡಿಸಿದರು. ವಿದ್ಯುತ್ಕಾಂತೀಯ ವಿಕಿರಣದ ಅಗಾಧತೆ ಅರಿತು ದೃಶ್ಯ ಉಪಕರಣಗಳು ಕಂಡುಕೊಂಡವು. ಪ್ರಸ್ತುತ ಅನ್ಯಗ್ರಹಗಳನ್ನು ವೀಕ್ಷಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾನವನ ಹುಡುಕಾಟದ ಸಂಶೋಧನೆಯ ಉನ್ನತಿಗೆ ಸಾಕ್ಷಿಯಾಗಿವೆ ಎಂದು ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications