ದಾವಣಗೆರೆ: 30 ಅಡಿ ಎತ್ತರದ ಶ್ರೀರಾಮನ ಮೂರ್ತಿ ಅನಾವರಣ

ದಾವಣಗೆರೆ. ಆಗಸ್ಟ್ 04: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಆ.5 ರಂದು ನಡೆಯುತ್ತಿರುವ ರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ.

ಈ ಹಿನ್ನೆಲೆಯಲ್ಲಿ ದಾವಣಗೆರೆಯ ಶ್ರೀರಾಮನ ಭಕ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ನಗರದ ಹೊಂಡದ ವೃತ್ತದಲ್ಲಿ ಸುಮಾರು 30 ಅಡಿ ಎತ್ತರದ ಶ್ರೀರಾಮನ ಬೃಹತ್ ಮೂರ್ತಿ ಅಳವಡಿಸಿದ್ದಾರೆ.

ಬುಧವಾರ ನಡೆಯುವ ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿ, ಯಾವುದೇ ವಿಘ್ನಗಳು ಅಡ್ಡಿಬಾರದಂತೆ ಪ್ರಾರ್ಥಿಸಿ ನಗರದ ಪಿ.ಜೆ ಬಡಾವಣೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಸರಳವಾಗಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ಹಿಂದೂಪರ ಸಂಘಟನೆಗಳ ಮುಖಂಡರಾದ ಯಶವಂತರಾವ್ ಜಾಧವ್ ತಿಳಿಸಿದ್ದಾರೆ.

 Davanagere: Installed 30 Feet High Statue Of Sri Rama

ಈ ಸಮಯದಲ್ಲಿ ಯಾವುದೇ ಘೋಷಣೆಗಳನ್ನು ಕೂಗದೇ, ಯಾರಿಗೂ ತೊಂದರೆಯಾಗದಂತೆ ಸರಳವಾಗಿ ಪೂಜೆ ಕೈಗೊಳ್ಳಲಾಗುವುದು, ನಂತರ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಜಗಜ್ಯೋತಿ ಬಸವಣ್ಣನವರ ಪ್ರತಿಮೆ, ಮದಕರಿ ನಾಯಕರ ಪ್ರತಿಮೆ, ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+