ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯ ಪ್ರತಿ ತಾಲ್ಲೂಕು ಕೇಂದ್ರದಲ್ಲೂ ಐಸೋಲೇಶನ್ ವಾರ್ಡ್

|
Google Oneindia Kannada News

ದಾವಣಗೆರೆ. ಏಪ್ರಿಲ್ 24: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಸಿಜಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಗಳು, ಲ್ಯಾಬ್, ಗಂಟಲು ದ್ರವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಯಾವುದೇ ಕೊರಾನಾ ಸೋಂಕಿತರು ಕಂಡುಬಂದಿಲ್ಲ, ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಮಂಡ್ಯಕ್ಕೆ ಕಂಟಕವಾದ ಮಳವಳ್ಳಿ ತಬ್ಲಿಘಿ ಸಂಪರ್ಕ ಮಂಡ್ಯಕ್ಕೆ ಕಂಟಕವಾದ ಮಳವಳ್ಳಿ ತಬ್ಲಿಘಿ ಸಂಪರ್ಕ

ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಐಸೋಲೇಶನ್ ವಾರ್ಡ್ ಗಳನ್ನು ಸಿದ್ದತೆ ಮಾಡಬೇಕು. ಹೆಚ್ಚುವರಿಯಾಗಿ 110 ಬೆಡ್ ಗಳನ್ನು ಮೀಸಲಿಡಬೇಕೆಂದರು. ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷಾ ಲ್ಯಾಬ್ ಪ್ರಾರಂಭಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ತಿಳಿಸಿದ್ದಾರೆ.

Isolation Ward In Every Taluk Center Of Davanagere District

ಸಚಿವರ ಸೂಚನೆ ಮೇರೆಗೆ ಪ್ರಯೋಗಾಲಯ ಪ್ರಾರಂಭಿಸುವ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು, ಆಸ್ಪತ್ರೆಗೆ ಬರುವವರಿಗೆ ಫ್ಯಾನ್ ಮೂಲಕ ಸ್ಯಾನಿಟೈಸರ್ ಮಾಡುತ್ತಿರುವ ಕ್ರಮ ಉತ್ತಮವಾಗಿದೆ. ಸ್ಯಾನಿಟೈಸರ್ ಫ್ಯಾನ್ ನೂತನ ಪ್ರಯೋಗವಾಗಿದ್ದು, ಪ್ರತಿಯೊಬ್ಬರಿಗೂ ಸ್ಯಾನಿಟೈಸ್ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

Isolation Ward In Every Taluk Center Of Davanagere District

ಈ ಸಂದರ್ಭದಲ್ಲಿ ಡಿಹೆಚ್ಒ ರಾಘವೇಂದ್ರ ಸ್ವಾಮಿ, ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

English summary
Davanagere DC Mahantesh Beelagi and SP Hanumantaraya Visited To District Hospital In Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X