ದೇಶ-ವಿದೇಶ ಸುತ್ತಾಡಿ ಕೆಲಸ ಮಾಡಿದ ಟೆಕ್ಕಿ, ಈಗ ಗ್ರಾ.ಪಂ ಅಧ್ಯಕ್ಷೆ
ದಾವಣಗೆರೆ, ಫೆಬ್ರವರಿ 13: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಒಂದಲ್ಲ ಒಂದು ವಿಸ್ಮಯ ಘಟನೆಗಳು ನಡೆಯುತ್ತಲೇ ಇರುತ್ತವೆ. ಚುನುವಣೆಯಲ್ಲಿ ಅಪ್ಪ-ಮಗ ಸ್ಪರ್ಧೆ ಮಾಡಿದರೆ, ಇತ್ತ ಅತ್ತೆ-ಸೊಸೆ ಸ್ಪರ್ಧಿಸಿರುತ್ತಾರೆ. ಚುನಾವಣೆ ಮುಗಿತು, ಫಲಿತಾಂಶ ಕೂಡ ಬಂತು, ಈಗ ಅಧ್ಯಕ್ಷಗಿರಿ ಆಯ್ಕೆ ಕೂಡ ಮುಗಿದು ಹೋಗಿದೆ. ಆದರೆ ದಾವಣಗೆರೆಯ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮ ಪಂಚಾಯಿತಿಗೆ ಇಂಜಿನಿಯರಿಂಗ್ ಮುಗಿಸಿ ಲಕ್ಷ ಲಕ್ಷ ಸಂಬಳ ಪಡೆಯುತ್ತಿದ್ದ ಉದ್ಯೋಗಿ, ಈಗ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿದ್ದಾರೆ.
ಮಾಹಿತಿ ತಂತ್ರಜ್ಞಾನದಲ್ಲಿ ಬಿ.ಇ ಪದವೀಧರೆಯಾಗಿರುವ ಬೆಂಗಳೂರು ನಗರದ ನಿವಾಸಿ ಸ್ವಾತಿ ತಿಪ್ಪೇಸ್ವಾಮಿ, ಅಮೆರಿಕದಲ್ಲಿ ಐದು ವರ್ಷ ಪ್ರತಿಷ್ಠಿತ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಮಾಜಸೇವೆ ಮಾಡುವ ತುಡಿತದೊಂದಿಗೆ ವಿದೇಶದಲ್ಲಿನ ಲಕ್ಷ ಲಕ್ಷ ಸಂಬಳ ಬರುವ ಹುದ್ದೆ ತೊರೆದು, ತಮ್ಮ ಸ್ವಗ್ರಾಮ ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮಕ್ಕೆ ಹಿಂದಿರುಗಿ ಬಂದು ಗ್ರಾಮದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಅತ್ಯಂತ ಹಿಂದುಳಿದ ತಾಲ್ಲೂಕುಗಳಲ್ಲಿ ಒಂದು
ಸ್ವಾತಿಯವರು ಯುಎಸ್ಎ ನಲ್ಲಿ ಸಾಪ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೆ ಲಕ್ಷಾಂತರ ರುಪಾಯಿ ಸಂಬಳ ಪಡೆಯುತ್ತಿದ್ದರು. ರಜೆ ಹಾಕಿ ತಂದೆಯನ್ನು ಹಾಗೂ ಗ್ರಾಮವನ್ನು ನೋಡಲು ಪ್ರತಿ ವರ್ಷ ಗ್ರಾಮಕ್ಕೆ ಬರುತ್ತಿದ್ದರು. ಅದರಲ್ಲೂ ಜಗಳೂರು ತಾಲ್ಲೂಕು ಎಂದರೆ ಅತ್ಯಂತ ಹಿಂದುಳಿದ ತಾಲ್ಲೂಕುಗಳಲ್ಲಿ ಇದು ಕೂಡ ಒಂದು. ಸರಿಯಾಗಿ ಮಳೆ, ಬೆಳೆ ಇಲ್ಲದೆ ಇಲ್ಲಿನ ಬಡ ಜನರಿಗೆ ಸರಿಯಾಗಿ ಉದ್ಯೋಗ ಸಿಗದೆ ಕಷ್ಟದ ಜೀವನ ಅನುಭವಿಸುತ್ತಿದ್ದಾರೆ.

ಉನ್ನತ ಶಿಕ್ಷಣ ಪಡೆದ ಸ್ವಾತಿ
ಹಳ್ಳಿಗಾಡಿನಲ್ಲಿ ಮೂಲ ಸೌಲಭ್ಯಗಳ ಕೊರತೆಯನ್ನು ಕಣ್ಣಾರೆ ಕಂಡ ಸ್ವಾತಿ ತಿಪ್ಪೇಸ್ವಾಮಿ, ಹಳ್ಳಿಗಳಲ್ಲೂ ಕನಿಷ್ಠ ಪ್ರಾಥಮಿಕ ಸೌಕರ್ಯಗಳನ್ನು ಕಲ್ಪಿಸುವ, ಹಳ್ಳಿಗಾಡಿನ ಜನರ ಜೀವನ ಮಟ್ಟವನ್ನು ಎತ್ತರಿಸುವ ಕನಸನ್ನು ಕಂಡಿದ್ದರು. ಗ್ರಾಮ ಪಂಚಾಯತಿಯಲ್ಲಿರುವ ಸೌಲಭ್ಯಗಳನ್ನು ಬಡವರಿಗೆ ದೊರಕುವಂತೆ ಮಾಡಿದರೆ ಸಾಕು ಅಭಿವೃದ್ಧಿ ಸಾಧ್ಯ ಎನ್ನುವ ಧ್ಯೇಯವನ್ನು ಇಟ್ಟುಕೊಂಡಿದ್ದ ಸ್ವಾತಿ, ಗ್ರಾಮ ಪಂಚಾಯತಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣೆಗೂ ಸ್ಪರ್ಧಿಸಿದರು. ಉನ್ನತ ಶಿಕ್ಷಣ ಪಡೆದ ಸ್ವಾತಿ ಅವರನ್ನು ತಾಲ್ಲೂಕಿನಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಸೊಕ್ಕೆ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು. ಇಲ್ಲಿ ವಿದ್ಯಾವಂತೆ ಸ್ವಾತಿ ತಿಪ್ಪೇಸ್ವಾಮಿ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ತಲೆಮಾರಿನ ರಾಜಕೀಯ ಹಿನ್ನೆಲೆ
ಸೊಕ್ಕೆ ಗ್ರಾ.ಪಂ ಅಧ್ಯಕ್ಷೆ, ಟೆಕ್ಕಿ ಸ್ವಾತಿ ತಿಪ್ಪೇಸ್ವಾಮಿ ಅವರು ತಲೆಮಾರಿನ ರಾಜಕೀಯ ಹಿನ್ನೆಲೆ ಉಳ್ಳವರಾಗಿದ್ದಾರೆ. ಸ್ವಾತಿ ತಂದೆ ತಿಪ್ಪೇಸ್ವಾಮಿ ತಮ್ಮ ಕುಟುಂಬದ ರಾಜಕೀಯ ಹಿನ್ನೆಲೆಯನ್ನು ಹಂಚಿಕೊಂಡಿದ್ದು, ಬ್ರಿಟಿಷರ ಆಡಳಿತಾವಧಿಯಲ್ಲಿ ನಮ್ಮ ತಾತ ತಿಪ್ಪಯ್ಯ ಸೊಕ್ಕೆ ಗ್ರಾಮದಲ್ಲಿ 1920-1931ರ ಅವಧಿಯಲ್ಲಿ ಕಂದಾಯ ಇನ್ಸಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ ನನ್ನ ಅಪ್ಪ ಜಿ.ಮದ್ದಾನಯ್ಯ 1965-1970ರ ಅವಧಿಯವರೆಗೆ ಸೊಕ್ಕೆ ಪಂಚಾಯತಿ ಅಧ್ಯಕ್ಷರಾಗಿದ್ದರು. ಕಳೆದ ಅವಧಿಯಲ್ಲಿ ನಮ್ಮ ಸಂಬಂಧಿಕ ಎಚ್.ಎಂ. ಕೊಟ್ರಯ್ಯ ಎರಡು ವರ್ಷ ಗ್ರಾ.ಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದಿದ್ದಾರೆ.

ವಿದ್ಯಾವಂತರ ಕೈಗೆ ಗ್ರಾಮ ಪಂಚಾಯತಿ ಅಧಿಕಾರ
ಸೊಕ್ಕೆಯನ್ನು ತಾಲ್ಲೂಕಿನಲ್ಲಿ ಮಾದರಿ ಪಂಚಾಯತಿಯಾಗಿ ರೂಪಿಸುವ ಉದ್ದೇಶ ಹೊಂದಿದ್ದು, ಇಲ್ಲಿನ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಅಧ್ಯಯನ ಮಾಡಿ ಪೂರಕ ಕಾರ್ಯವಿಧಾನ ರೂಪಿಸಿಕೊಳ್ಳಬೇಕು. ಬಹಳಷ್ಟು ಕೆಲಸ ಆಗುವುದಕ್ಕಿದೆ. ಸದ್ಯಕ್ಕೆ ನನ್ನ ಸಾಫ್ಟ್‌ವೇರ್ ಕೆಲಸದಿಂದ ಸಂಪೂರ್ಣ ಆಚೆ ಬಂದಿದ್ದು, ಮಕ್ಕಳು ಮತ್ತು ಗ್ರಾ.ಪಂ ಅಧ್ಯಕ್ಷಗಿರಿ ಎರಡೇ ನನ್ನ ಎದುರಿನ ಆಯ್ಕೆ ಎಂದು ಹೇಳಿದರು.
ಅಲ್ಲದೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಓದು, ಬರಹ ಬಾರದಿರುವರು ಮಾತ್ರ ಚುನಾವಣೆಗೆ ನಿಂತು, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ವಿಫಲವಾಗುತ್ತಿದ್ದಾರೆ. ಇತ್ತಿಚಿನ ದಿನಗಳಲ್ಲಿ ವಿದ್ಯಾವಂತ ಜನರು ಗ್ರಾಮ ಪಂಚಾಯತಿಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದೊಳ್ಳೆ ಬದಲಾವಣೆ ಸಿಕ್ಕಂತಾಗಿದೆ. ಅದರಲ್ಲೂ ಸ್ವಾತಿಯವರಂತಹ ವಿದ್ಯಾವಂತರ ಕೈಗೆ ಗ್ರಾಮ ಪಂಚಾಯತಿ ಅಧಿಕಾರ ಸಿಕ್ಕರೆ ಗ್ರಾಮಗಳ ಅಭಿವೃದ್ಧಿ ಮತ್ತಷ್ಟು ಹೆಚ್ಚಾಗಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications