ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿ

ದಾವಣಗೆರೆ, ಫೆಬ್ರವರಿ 17: ದಾವಣಗೆರೆ ದಕ್ಷಿಣ ಕಾಂಗ್ರೆಸ್ ಶಾಸಕ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಬುಧವಾರ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಒಡೆತನದ ದಾವಣಗೆರೆಯ ಮೂರು ಕಾಲೇಜುಗಳಲ್ಲಿ ಅಧಿಕಾರಿಗಳಿಂದ ಕಡತ ಪರಿಶೀಲನೆ ನಡೆಸಲಾಗುತ್ತಿದ್ದು, ಆರು ಜನ ಐಟಿ ಅಧಿಕಾರಿಗಳ ತಂಡ ದಾವಣಗೆರೆ ಜೆಜೆಎಂ, ಎಸ್ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್ ಗಳ ಮೇಲೆ ದಾಳಿ ಮಾಡಿದ್ದಾರೆ.

ವಿದ್ಯಾರ್ಥಿಗಳ ಪ್ರವೇಶ ಹಾಗೂ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ‌ ಮಾಡಿದ ಶುಲ್ಕದ ಬಗ್ಗೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Davanagere: IT Raid On Shamanur Shivashankarappas Bapuji Medical College

ಕೆಲ ವಿದ್ಯಾರ್ಥಿಗಳಿಗೆ ಅನಿರೀಕ್ಷಿತವಾಗಿ ಭೇಟಿ ಮಾಡಿ ಶುಲ್ಕ ತುಂಬಿದ ವಿವರವನ್ನು ಅಧಿಕಾರಿಗಳು ಪಡೆಯುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯಿಂದ ಬಂದ ಐಟಿ ಅಧಿಕಾರಿಗಳ ತಂಡದಿಂದ ಈ ದಾಳಿ ನಡೆದಿದೆ.

Recommended Video

      103ಕ್ಕೆ ಏರಿಕೆಯಾದ ಬಿಳೇಕಹಳ್ಳಿ ಅಪಾರ್ಟ್‌ಮೆಂಟ್‌ನ ಕೊರೊನಾ ಸೋಂಕಿತರ ಸಂಖ್ಯೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+