ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ
ದಾವಣಗೆರೆ, ನವೆಂಬರ್ 10: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆ ಸಮೀಪ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ಲ್ಯಾಂಡ್ ರೋವರ್ ಕಾರಿನಲ್ಲಿ ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್ ಅವರು ದಾವಣಗೆರೆಯಿಂದ ಹುಬ್ಬಳ್ಳಿಯಲ್ಲಿನ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಗರದ ಹಳೆ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಡಿವೈಡರ್ ಬಳಿ ಪ್ರಶಾಂತ್ ಶೆಟ್ಟರ್ ಇದ್ದ ಕಾರು ಹಾಗೂ ಲಾರಿಯ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಎಲ್ಲರನ್ನೂ ಸ್ಥಳೀಯ ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ದಾವಣಗೆರೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್ ಐ ಕಿರಣ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.











Click it and Unblock the Notifications