ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಜೆಡಿಎಸ್ ನಾಯಕ!

|
Google Oneindia Kannada News

ದಾವಣಗೆರೆ, ನವೆಂಬರ್ 10; ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಜೆಡಿಎಸ್ ಪಕ್ಷ ಬಿಡುವ ನಾಯಕರ ಪಟ್ಟಿ ಬೆಳೆಯುತ್ತಲೇ ಇದೆ. ದಾವಣಗೆರೆ ಜಿಲ್ಲೆಯ ಪಕ್ಷದ ನಾಯಕರೊಬ್ಬರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಂಗಳವಾರ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಾಯಕ ಬಿ. ದೇವೇಂದ್ರಪ್ಪ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದರು. ಹಲವು ದಿನಗಳಿಂದ ದೇವೇಂದ್ರಪ್ಪ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು.

ಬಿಜೆಪಿ-ಜೆಡಿಎಸ್; ಉಪ ಚುನಾವಣೆಯಲ್ಲಿ ವಿರೋಧ, ನಗರಸಭೆಯಲ್ಲಿ ಮೈತ್ರಿ! ಬಿಜೆಪಿ-ಜೆಡಿಎಸ್; ಉಪ ಚುನಾವಣೆಯಲ್ಲಿ ವಿರೋಧ, ನಗರಸಭೆಯಲ್ಲಿ ಮೈತ್ರಿ!

2018ರ ಚುನಾವಣೆಯಲ್ಲಿ ಬಿ. ದೇವೇಂದ್ರಪ್ಪ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಜಗಳೂರು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. 13,401 ಮತಗಳನ್ನು ಪಡೆದು ಸೋಲು ಕಂಡಿದ್ದರು. ಈಗ 2023ರ ಚುನಾವಣೆ ಸಿದ್ಧತೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಹೇಗೆ ಲಾಭವಾಗಲಿದೆ? ಎಂದು ಕಾದು ನೋಡಬೇಕಿದೆ.

ತುಮಕೂರು; ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ನಾಯಕರ ಘೋಷಣೆ ತುಮಕೂರು; ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ನಾಯಕರ ಘೋಷಣೆ

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿ. ಕೆ. ಶಿವಕುಮಾರ್, "ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಲಿ. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿ ಸೂಕ್ತ ಸಮಯದಲ್ಲಿ ನಿರ್ಧಾರವನ್ನು ಕೈಗೊಳ್ಳಲಿದೆ" ಎಂದು ಹೇಳಿದರು.

ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಪ್ರಭಾವಿ ಜೆಡಿಎಸ್ ನಾಯಕ! ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಪ್ರಭಾವಿ ಜೆಡಿಎಸ್ ನಾಯಕ!

ಬಹಳ ದಿನಗಳಿಂದ ಮುಂದೂಡಿಕೆ

ಬಹಳ ದಿನಗಳಿಂದ ಮುಂದೂಡಿಕೆ

ಡಿ. ಕೆ. ಶಿವಕುಮಾರ್ ಮಾತನಾಡಿ, "ಬಹಳ ದಿನಗಳಿಂದ ಬಿ. ದೇವೇಂದ್ರಪ್ಪ ಪಕ್ಷ ಸೇರ್ಪಡೆ ಮುಂದೂಡಿಕೆಯಾಗುತ್ತೇ ಬಂದಿತ್ತು. ಅಲ್ಲಂ ವೀರಭದ್ರಪ್ಪ ಅವರ ಸಮಿತಿ ಬೇಷರತ್‌ ಆಗಿ ದೇವೇಂದ್ರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಶಿಫಾರಸು ಮಾಡಿತ್ತು" ಎಂದರು.

"ನಾನು ರಾಜೇಶ್‌, ಜಯಸಿಂಹ, ಬಸವರಾಜ ಸೇರಿದಂತೆ ಎಲ್ಲಾ ಸ್ಥಳೀಯ ನಾಯಕರು ಸಮಾಲೋಚನೆ ನಡೆಸಿ, ಷರತ್ತು ಇಲ್ಲದೇ ಪಕ್ಷ ಸೇರುವವರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಿದ್ದೆವು" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಎಲ್ಲ ಮುಖಂಡರನ್ನು ಸ್ವಾಗತಿಸುವೆ

ಎಲ್ಲ ಮುಖಂಡರನ್ನು ಸ್ವಾಗತಿಸುವೆ

"ಕಾಂಗ್ರೆಸ್ ಪಕ್ಷದ ಸಿದ್ದಾಂತದ ಮೇಲೆ ನಂಬಿಕೆ ಇರುವವರು ಸದಸ್ಯತ್ವ ಪಡೆಯಬಹುದಾಗಿದೆ. ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರುತ್ತಿರುವ ಬಿ. ದೇವೇಂದ್ರಪ್ಪ ಹಾಗೂ ಇತರ ಮುಖಂಡರನ್ನು ನಮ್ಮ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ. ಅವರು ಸ್ವ ಇಚ್ಛೆಯಿಂದ ಕಾಂಗ್ರೆಸ್ ಪಕ್ಷವನ್ನು ಸೇರಿ ಸೇವೆ ಮಾಡಲು ಮುಂದಾಗಿದ್ದಾರೆ. ದೇಶಕ್ಕೆ ಕಾಂಗ್ರೆಸ್ ಅನಿವಾರ್ಯ, ಕಾಂಗ್ರೆಸ್ ಇತಿಹಾಸವೇ ದೇಶದ ಇತಿಹಾಸ ಎಂದು ಮನದಟ್ಟು ಮಾಡಬೇಕಿದೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಸದಸ್ಯತ್ವ ಅಭಿಯಾನ

ಕಾಂಗ್ರೆಸ್ ಸದಸ್ಯತ್ವ ಅಭಿಯಾನ

ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ನೀಡಿದ ಡಿ. ಕೆ. ಶಿವಕುಮಾರ್, "12 ವರ್ಷಗಳ ನಂತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎಲ್ಲರಿಗೂ ಮುಕ್ತ ಸದಸ್ಯತ್ವ ನೀಡಲು ನಿರ್ಧರಿಸಲಾಗಿದೆ. ನವೆಂಬರ್ 14ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಯಾನ ಆರಂಭಿಸಲಾಗುತ್ತಿದೆ. ಹಳೆಯ ಸದಸ್ಯರು ಸಹ ಈಗ ತಮ್ಮ ಸದಸ್ಯತ್ವ ನವೀಕರಣ ಮಾಡಿಸಿಕೊಳ್ಳಬಹುದು. ಯುವ, ಮಹಿಳಾ, ಕಿಸಾನ್‌, ಎನ್‌ಎಸ್‌ಯುಐ ಸೇರಿದಂತೆ ಎಲ್ಲಾ ಘಕಟದಲ್ಲಿ ಮತ್ತೆ ಸದಸ್ಯತ್ವಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ" ಎಂದರು.

Recommended Video

ಇಂಡೋ-ಪಾಕ್ ಪಂದ್ಯವನ್ನು ಎಷ್ಟು ಮಂದಿ ನೋಡಿದ್ದಾರೆ?ಕ್ರಿಕೆಟ್ ಇತಿಹಾಸದ ಹೊಸ ದಾಖಲೆ | Oneindia Kannada
5 ರೂ. ನೀಡಿ ಸದಸ್ಯತ್ವ

5 ರೂ. ನೀಡಿ ಸದಸ್ಯತ್ವ

"ಸದಸ್ಯತ್ವ ಪಡೆಯಲು ಆನ್‌ಲೈನ್‌, ಆಫ್‌ಲೈನ್ ಮೂಲಕವೂ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಬ್ಬರು 5 ರೂ. ನೀಡಿ ಸದಸ್ಯತ್ವ ಪಡೆಯಬಹುದಾಗಿದೆ. ಸಕ್ರಿಯ ಸದಸ್ಯರಾಗಲು 100 ಜನರನ್ನು ಮಾಡಿ, 100 ರೂ. ಶುಲ್ಕ ಕಟ್ಟಬೇಕು. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಎಲ್ಲಾ ಘಟಕದ ನಾಯಕರು, ಪದಾಧಿಕಾರಿಗಳು, ಪಂಚಾಯಿತಿ ಮಟ್ಟದ ಹಾಲಿ ಹಾಗೂ ಮಾಜಿ ಸದಸ್ಯರು ಆಗಮಿಸಬೇಕು" ಎಂದು ಡಿ. ಕೆ. ಶಿವಕುಮಾರ್ ಕರೆ ನೀಡಿದರು.

English summary
Davanagere district Jagalur assembly seat JD(S) leader B. Devendrappa joined Congress. He lost in 2018 election in Jagalur as JD(S) candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X