ಜುಲೈ 1ರಂದು ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಜೆಡಿಎಸ್ ಸಮಾವೇಶ
ಬೆಂಗಳೂರು, ಜೂನ್ 29 : 'ಜೆಡಿಎಸ್ ವತಿಯಿಂದ ಜುಲೈ 1ರಂದು ದಾವಣಗೆರೆಯಲ್ಲಿ ವಾಲ್ಮೀಕಿ ಜಯಂತಿ ಹಾಗೂ ರಾಜ್ಯ ಮಟ್ಟದ ಜೆಡಿಎಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ'ಎಂದು ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಎನ್.ವೇಣು ಗೋಪಾಲ ನಾಯಕ್ ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜೆಡಿಎಸ್ ಅಧಿಕಾರದಲ್ಲಿದ್ದಾಗ ವಾಲ್ಮೀಕಿ ಸಮುದಾಯಕ್ಕೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಲಾಗಿತ್ತು. ಸಮುದಾಯದ ಮತ್ತಷ್ಟು ಅಭಿವೃದ್ಧಿಗೆ ಜೆಡಿಎಸ್ ಪಕ್ಷವನ್ನು ರಾಜ್ಯದಾದ್ಯಂತ ಸಂಘಟಿಸಿ, 2018ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರ ಬೇಕಿದೆ. ಈ ದೃಷ್ಟಿಯಿಂದ ಸಮಾವೇಶ ಆಯೋಜಿಸಲಾಗಿದೆ' ಎಂದರು.

'ಸಮಾವೇಶಕ್ಕೆ ರಾಜ್ಯದಾದ್ಯಂತ 4 ಲಕ್ಷಕ್ಕೂ ಅಧಿಕ ಜನರು ಬರಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ಸಂಸದರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ' ಎಂದು ಹೇಳಿದರು.












Click it and Unblock the Notifications