ಬ್ಯಾಂಕ್ ಗಳಲ್ಲಿ ಕನ್ನಡ ಕಡೆಗಣನೆ: ದಾವಣಗೆರೆಯಲ್ಲಿ ಪ್ರತಿಭಟನೆ
ದಾವಣಗೆರೆ, ಮೇ 26: ದೈನಂದಿನ ವ್ಯವಹಾರದಲ್ಲಿ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕನ್ನಡ ವಿರೋಧಿ ನಡೆಯನ್ನು ಬದಲಾಯಿಸಿಕೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ ಕಾರ್ಯಕರ್ತರು ಇಂದು ದಾವಣಗೆರೆಯ ಹೆಚ್.ಕೆ.ಆರ್ ಸರ್ಕಲ್ ಬಳಿಯಿರುವ ಎಸ್.ಬಿ.ಐ ಬ್ಯಾಂಕಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
Recommended Video
ಪಾಸ್ ಬುಕ್, ಚಲನ್, ಚೆಕ್ ಬುಕ್ ಗಳಲ್ಲಿ ಸ್ಥಳೀಯ ಭಾಷೆಯಾದ ಕನ್ನಡವನ್ನು ಕಡೆಗಣಿಸಿ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಿಕೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಇಲ್ಲಿ ವ್ಯವಹಾರ, ಉದ್ಯೊಗ, ಉದ್ಯಮ, ಶಿಕ್ಷಣ ಸೇರಿದಂತೆ ಎಲ್ಲಾ ರಂಗಗಳಲ್ಲಿ ಕನ್ನಡವೇ ಪ್ರಧಾನವಾಗಬೇಕು ಎಂದು ಸರಕಾರ ದಶಕಗಳ ಹಿಂದೆಯೇ ಆದೇಶಿಸಿದೆ ಎಂದರು.
ಬ್ರಿಟಿಷ್ ಅಧಿಕಾರಿಗಳು ಸಹ ಇಲ್ಲಿ ಜನರ ಭಾಷೆಯಲ್ಲಿ ತಮ್ಮ ಆಡಳಿತ ಮತ್ತು ವ್ಯವಹಾರವನ್ನು ನಡೆಸಿ ಸ್ಥಳಿಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ಇತ್ತೀಚೆಗೆ ಎಲ್ಲಾ ವ್ಯವಹಾರಗಳಲ್ಲಿ ಹಿಂದಿ, ಇಂಗ್ಲೀಷ್ ಭಾಷೆಗಳನ್ನು ಬಳಸುತ್ತಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನರಿಗೆ ಭಾಷಾ ಸಮಸ್ಯೆ ಎದುರಾಗುತ್ತದೆ ಎಂದು ಕನ್ನಡಪರ ಹೋರಾಟಗಾರರು ಹೇಳಿದರು.

ಇಲ್ಲಿನ ಬ್ಯಾಂಕಿನ ಸಿಬ್ಬಂದಿಗಳಿಗೆ ಕನ್ನಡವೇ ಬರುವುದಿಲ್ಲ, ಕೆಲವೊಂದು ವೇಳೆ ಉಡಾಫೆಯಾಗಿ ಮಾತನಾಡಿ ಗ್ರಾಹಕರನ್ನು ಅವಮಾನಿಸುವ ಕೆಲಸ ಮಾಡಿದ್ದಾರೆ, ಇದು ನಿಜಕ್ಕೂ ಸರಿಯಾದ ನಡೆಯಲ್ಲ. ರಾಜ್ಯ ಭಾಷೆಯನ್ನು ಗೌರವಿಸದೇ ವ್ಯವಹರಿಸುವ ಬ್ಯಾಂಕ್ ನ ನಡೆಯನ್ನು ಖಂಡಿಸಿದರು.

15 ದಿನಗಳೊಳಗಾಗಿ ಬ್ಯಾಂಕಿನ ಎಲ್ಲಾ ವ್ಯವಹಾರಗಳಲ್ಲಿ ಕನ್ನಡವನ್ನು ಮುದ್ರಿಸಿ ವ್ಯವಹರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ್, ಯುವಘಟಕದ ಅಧ್ಯಕ್ಷ ಮಂಜುನಾಥ, ಶೇರ್ ಅಲಿ, ಉಡೇಕರ್ ಮತ್ತಿತರರಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications